ಮಡಿಕೇರಿ ಜ.10 : ಪ್ರಸಕ್ತ(2022-23) ಸಾಲಿನ ಡಿಸೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಜ.18 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.













