ಮಡಿಕೇರಿ ಜ.10 : ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಕರಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆಯ ಅಂಗವಾಗಿ ವಿ ಮಕ್ಕಳ ಸಂತೆ ನಡೆಯಿತು.
ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯೆ ನೇತ್ರಾವತಿ ಉದ್ಘಾಟಿಸಿದರು.
ವಿದ್ಯಾರ್ಥಿಗಳು ಬಗೆ ಬಗೆಯ ದಿನಸಿ ವಸ್ತುಗಳು, ತರಕಾರಿ ಮತ್ತಿತರ ವಸ್ತುಗಳನ್ನು ಮಾರಾಟ ಮಾಡಿ ಜನ ಮೆಚ್ಚುಗೆ ಗಳಿಸಿದರು.
ಈ ಸಂದರ್ಭ ಗ್ರಾ.ಪಂ ಸದಸ್ಯ ವಿಲೀನ್ ಮಾತನಾಡಿ, ಇಂತಹ ವಿನೂತನ ಕಾರ್ಯಕ್ರಮಗಳು ಶಾಲೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಮಕ್ಕಳಲ್ಲಿ ವ್ಯಾಪಾರಕ್ಕೆ ಮತ್ತು ಗ್ರಾಹಕರ ನಡುವಿನ ಸಂಬಂಧವನ್ನು ಹೇಗೆ ಬೆಳೆಸಿಕೊಳ್ಳಬಹುದು ಎಂದು ತಿಳಿಯಲಾಗುವುದು ಎಂದರು..
ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ, ಸಹ ಶಿಕ್ಷಕ ದಮಯಂತಿ, ಅಂಗನವಾಡಿ ಕಾರ್ಯಕರ್ತೆ ಲಿಬ್ರಾಹಿಂ, ಗ್ರಂಥಾಲಯ ಮೇಲ್ವಿಚಾರಕಿ ರಿನಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ವರದಿ : ನೌಫಲ್ ಕಡಂಗ