ಮಡಿಕೇರಿ ಜ.10 : ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿಯಾಗಿದ್ದು, ಎಮ್ಮೆಯೊಂದು ಬಲಿಯಾಗಿದೆ. ಬಲ್ಯಮಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚೇಂದೀರ ಸುರೇಶ್ ಎಂಬುವವರಿಗೆ ಸೇರಿದ ಎಮ್ಮೆ ಇದಾಗಿದೆ.
ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ಇದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ತಿಂಗಳ ಹಿಂದೆ ಹುಲಿಗಳು ಹಸುಗಳನ್ನು ಬಲಿ ಪಡೆದ ಘಟನೆಗಳು ನಡೆದಿತ್ತು. ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.