ಮಡಿಕೇರಿ ಜ.10 : ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರ ಆಯ್ಕೆ ಅಸಿಂಧುವೆಂದು ಆರೋಪಿಸುವುದು ಸರಿಯಲ್ಲ, ನಿಯಮ ಬದ್ಧವಾಗಿಯೇ ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಂದು ಸಂಘದ ನೂತನ ಅಧ್ಯಕ್ಷ ರತ್ನಾಕರ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಮಾಜಿ ಅಧ್ಯಕ್ಷ ಬಿ.ಡಿ.ನಾರಾಯಣ ಅವರ ಉಪಸ್ಥಿತಿಯಲ್ಲಿ ಸಂಘದ ಸದಸ್ಯರುಗಳ ಹಾಜರಾತಿಯಲ್ಲಿ ಸಂಘದ ಮಹಾಸಭೆಯನ್ನು ನಡೆಸಲಾಗಿದೆ. ಈ ಸಭೆ ಅಸಿಂಧುವೆಂದು ಆರೋಪಿಸುವವರು ಸಂಘದ ಬೈಲ ಓದಿ ನೋಡಿಲ್ಲ, ಇಂತಹವರಿಂದ ಕಾನೂನಿನ ಪಾಠದ ಅಗತ್ಯತೆ ತಮಗಿಲ್ಲವೆಂದು ಹೇಳಿದರು.
ಕೊಡಗು ಜಿಲ್ಲಾ ಬಂಟರ ಸಂಘದ ಮಹಾಸಭೆಗೂ ಮುಂಚಿತವಾಗಿ, ಮತದಾನದ ಹಕ್ಕುಳ್ಳ ಸದಸ್ಯರಿಗೆ ಸಭೆಯ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಸಭೆಯಲ್ಲಿ ಹಾಜರಿದ್ದ ಸದಸ್ಯರುಗಳ ಸಮ್ಮುಖದಲ್ಲೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದೆ ಮತ್ತು ಇದನ್ನು ಸಭಾ ನಡಾವಳಿಯಲ್ಲೂ ದಾಖಲಿಸಲಾಗಿದೆ ಎಂದರು.
ನೂತನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷನಾಗಿ ರತ್ನಾಕರ ಶೆಟ್ಟಿಯಾದ ನಾನು, ಪ್ರಧಾನ ಕಾರ್ಯದರ್ಶಿಯಾಗಿ ಶಬರೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಮದನ್ ಶೆಟ್ಟಿ ಮತ್ತು ಸುರೇಶ್ ರೈ, ಖಜಾಂಚಿಯಾಗಿ ಗಿರೀಶ್ ಶೆಟ್ಟಿ, ಜಿಲ್ಲಾ ಸಂಚಾಲಕರಾಗಿ ಜಯರಾಂ ರೈ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೀತು ರೈ, ಪದ್ಮಾವತಿ ರೈ, ಕವಿತಾ ರೈ, ಜನಾರ್ಧನ ರೈ, ಅಶ್ವಿನಿ ರೈ, ಗೌರವಾಧ್ಯಕ್ಷರಾಗಿ ಮಾಜಿ ಅಧ್ಯಕ್ಷರಾದ ಬಿ.ಡಿ. ನಾರಾಯಣ ರೈ, ಕೆ.ಆರ್. ಬಾಲಕೃಷ್ಣ ರೈ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದರು.
ಬಂಟರ ಸಂಘದ ಅಧ್ಯಕ್ಷರಾಗಿದ್ದ ಬಿ.ಡಿ.ನಾರಾಯಣ ರೈ ಅವರು ತಮ್ಮ ಅವಧಿಯಲ್ಲಿ ನಿಷ್ಕ್ರೀಯರಾಗಿದ್ದರು ಎನ್ನುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇವರು ತಮ್ಮ ಅವಧಿಯಲ್ಲಿ ನಡೆಸಿದ ಸಭೆ ಮತ್ತು ಕಾರ್ಯಕ್ರಮಗಳ ಮಾಹಿತಿ ನಡಾವಳಿಯಲ್ಲಿ ದಾಖಲಾಗಿದೆ. ನಾರಾಯಣ ರೈ ಅವರು, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ, ಬಂಟರ ಸಮೂಹವನ್ನು ಸಂಘಟಿಸಲು ಸಾಕಷ್ಟು ಶ್ರಮಿಸಿದ್ದಾರೆ. ಕೋವಿಡ್ ಮೊದಲಾದ ಕಾರಣಗಳಿಂದ ಕಳೆದ ಎಂಟು ವರ್ಷಗಳ ಅವಧಿಯಲ್ಲಿ ನೂತನ ಆಡಳಿತ ಮಂಡಳಿಯ ರಚನೆ ಸಾಧ್ಯವಾಗಿರಲಿಲ್ಲವೆಂದು ರತ್ನಾಕರ ಶೆಟ್ಟಿ ಸಮಜಾಯಿಷಿಕೆ ನೀಡಿದರು.
ಸಂಘದ ಮಾಜಿ ಅಧ್ಯಕ್ಷ ಬಿ.ಡಿ.ನಾರಾಯಣ ರೈ ಮಾತನಾಡಿ, ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಅಲ್ಲಗಳೆದು, ತಾನು ತಾಲ್ಲೂಕು ಮತ್ತು ಜಿಲ್ಲಾ ಅಧ್ಯಕ್ಷನಾದ ಬಳಿಕ ಬಂಟರ ಸಂಘಟನೆ ಸಾಧ್ಯವಾಗಿದೆಯೆಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಶಬರೀಶ್ ಶೆಟ್ಟಿ ಹಾಗೂ ಗೌರವಾಧ್ಯಕ್ಷ ಬಾಲಕೃಷ್ಣ ರೈ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*