ಮಡಿಕೇರಿ ಜ.10 : ಕರ್ನಾಟಕ ರಾಜ್ಯ ಯುವ ಸಂಘಗಳ ವತಿಯಿಂದ ನೀಡಲಾಗುವ ರಾಜ್ಯ ಯುವ ಪ್ರಶಸ್ತಿಗೆ ಕಗೋಡ್ಲು ಗ್ರಾಮದ ಕೆ.ಎಂ. ಮೋಹನ್ ಆಯ್ಕೆಯಾಗಿದ್ದಾರೆ.
ಇವರು ಕಗೋಡ್ಲು ಕಾವೇರಿ ಯುವಕ ಸಂಘದ ಸದಸ್ಯರಾಗಿ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಉಪಾಧ್ಯಕ್ಷರಾಗಿ, ಕೊಡಗು ಜಿಲ್ಲಾ ಯುವ ಒಕ್ಕೂಟದ ಖಜಾಂಚಿತಾಗಿ, ಭಗವತಿ ದೇವಾಲಯ ಸಮಿತಿ ಸದಸ್ಯರಾಗಿ, ಕಗೋಡ್ಲು ಗಣೇಶ್ ಸೇವಾ ಸಮಿತಿ ಕಗೋಡ್ಲು ಸದಸ್ಯರಾಗಿ ಅನೇಕ ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಸುಬ್ರಮಣ್ಯದಲ್ಲಿ ಜ.18 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಪಿ ಸುಕುಮಾರ್ ಪತ್ರಿಕಾ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.