ಮಡಿಕೇರಿ ಜ.10 : ಮಡಿಕೇರಿಯ ಮೆಡಿಕಲ್ ಕಾಲೇಜಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ.
ಬಡಾವಣೆಯ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತ (19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.













