ಸುಂಟಿಕೊಪ್ಪ,ಜ.11 : ತಮಿಳು ಸಂಘದ ವತಿಯಿಂದ ಜ.15 ರಂದು 23ನೇ ವರ್ಷದ ಪೊಂಗಲ್ ಹಾಗೂ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ವಿಘ್ನೇಶ್ ತಿಳಿಸಿದರು.
ಅಂದು ಬೆಳಿಗ್ಗೆ 10 ಗಂಟೆಗೆ ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಮಹಾಗಣಪತಿ ದೇವಸ್ಥಾನದಿಂದ ಹಾಲಿನ ಕಳಸದೊಂದಿಗೆ ಮೆರವಣಿಗೆ ಹೊರಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶ್ರೀ ಚಾಮುಂಡೇಶ್ವರಿ ದೇವಸ್ಥನಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಿಸಿದರು.
ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಭಕ್ತಾಧಿಗಳಿಗೆ 1 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಅನ್ನÀ ಸಂತರ್ಪಣೆಯನ್ನು ನೇರವೇರಿಸಲಾಗುವುದು. ನಂತರ 3.30ರಿಂದ ಸಂಜೆ 6 ಗಂಟೆಯವರೆಗೆ ಪುರುಷರಿಗೆ ಮಹಿಳೆಯರಿಗೆ ಮಕ್ಕಳಿಗೆ ವಿವಿಧ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.
ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಇರಿಸಿ ವಿದ್ಯುತ್‍ದೀಪ ಅಲಂಕೃತ ಮಂಟಪದ ಮೆರವಣಗೆಯು ಸುಂಟಿಕೊಪ್ಪ ಪಟ್ಟಣದಲ್ಲಿ ಸಾಗಲಿದೆ. ರಾತ್ರಿ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ವಿಶೇಷ ಪೂಜೆಯ ನಂತರ ಭಕ್ತಾಧಿಗಳಿಗೆ ಪ್ರಸಾದ (ಪೊಂಗಳ್) ವಿನಿಯೋಗ ನಡೆಯಲಿದೆ. ಎಂದು ಪತ್ರಿಕಾ ಹೇಳಿಕೆಯಲ್ಲಿ ತಮಿಳು ಸಂಘದ ಅಧ್ಯಕ್ಷರಾದ ವಿಘ್ನೇಶ್ ತಿಳಿಸಿದ್ದಾರೆ.
ಈ ಸಂದರ್ಭ ಸಂಘದ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಆರ್.ಅರುಣ್ ಕುಮಾರ್, ಖಜಾಂಚಿ ವೇಲುಮುರುಗನ್ ಉಪಾಧ್ಯಕ್ಷ ಶರವಣ, ಸಂಘಟಣಾ ಕಾರ್ಯದರ್ಶಿ ಎಸ್.ಸೂರ್ಯ ಹಾಜರಿದ್ದರು.













