ಮಡಿಕೇರಿ ಜ.15 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನದಲ್ಲಿ “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯ ಅನಾವರಣ ಕಾರ್ಯಕ್ರಮ ಜ.15 ರಂದು ನಡೆಯಲಿದೆ.
ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಮ್ಮ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ನಡೆಯವ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹಾಗೂ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಪಿ.ಕೃಷ್ಣಮೂರ್ತಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸುಮಾರು 9 ಅಡಿ ಎತ್ತರದ “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯನ್ನು ಕೆತ್ತಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಕಾರ್ಕಳದ ಗುಣವಂತೇಶ್ವರ ಭಟ್ ಉಪನ್ಯಾಸ ನೀಡಲಿದ್ದಾರೆ. ಸಂಘದ ರೈತ ಸದಸ್ಯರ 3 ರಿಂದ 9 ವರ್ಷದೊಳಗಿನ ಮಕ್ಕಳು ವಾಯುಪುತ್ರ ಮೂರ್ತಿಗೆ ಅಭಿಷೇಕ ಮಾಡಲಿದ್ದಾರೆ. ಮೂರ್ತಿಯನ್ನು ಶ್ರೀಕೃಷ್ಣ ಶಿಲೆಯಿಂದ ಕೆತ್ತಲಾಗಿದೆ ಎಂದು ತಿಳಿಸಿದರು.
ಶಿಥಿಲಾವಸ್ಥೆಗೊಂಡಿದ್ದ ಈರಳೆವಳಮುಡಿ ಶಾಖೆಯ ಹಳೆಯ ಕಟ್ಟಡವನ್ನು ಸುಮಾರು 30 ಲಕ್ಷ ರೂ.ಗಳಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು, “ವಾಯುಪುತ್ರ ಭವನ” ಎಂದು ಹೆಸರಿಡಲಾಗಿದೆ. ಈ ಸಂಕೀರ್ಣದಲ್ಲಿ ವಸತಿಗೃಹ, ದಿನಸಿ ಅಂಗಡಿ ಮತ್ತು ನ್ಯಾಯ ಬೆಲೆ ಅಂಗಡಿ ಕಾರ್ಯನಿರ್ವಹಿಸುತ್ತಿದೆ. ನಷ್ಟದಲ್ಲಿದ್ದ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘವನ್ನು ಲಾಭದತ್ತ ಕೊಂಡೊಯ್ಯಲಾಗಿದೆ. ಸಾಲವನ್ನೇ ಮಾಡದೆ ದಾನಿಗಳ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ.
ಸಂಘದ ಕಟ್ಟಡದಲ್ಲಿ ನರೇಂದ್ರಮೋದಿ ಭವನ ನಿರ್ಮಿಸಿ ಕಾವೇರಿ, ಪಶುಪತಿ, ಪುಣ್ಯಕೋಟಿ ಸೇರಿದಂತೆ ಹಲವು ದೇವರುಗಳ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಈರಳೆವಳಮುಡಿ ಶಾಖೆಯಲ್ಲಿ ಪ್ರತಿಷ್ಠಾಪಿಸಲ್ಪಡುತ್ತಿರುವ ವಾಯುಪುತ್ರ ಮೂರ್ತಿ ಹತ್ತನೇಯದ್ದಾಗಿದೆ. ನಾನು ಸಹಕಾರ ಕ್ಷೇತ್ರಕ್ಕೆ ಬಂದು 25 ವರ್ಷಗಳಾಗುತ್ತಿದ್ದು, ನನ್ನ ಸೇವೆ ತೃಪ್ಪಿ ತಂದಿದೆ ಎಂದು ಮಣಿಉತ್ತಪ್ಪ ಹೇಳಿದರು.
ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಕಾಫಿ ಗುಣಮಟ್ಟ ಪರೀಕ್ಷಾ ಕೇಂದ್ರ ಮತ್ತು ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸಿಮೆಂಟ್, ಗೊಬ್ಬರ, ಸುಣ್ಣ, ಔಷಧಿ ಸೇರಿದಂತೆ ಕೃಷಿಗೆ ಅಗತ್ಯವಿರುವ ಎಲ್ಲಾ ಸಾಮಾಗ್ರಿಗಳು ಸಂಘದ ಕಟ್ಟಡದಲ್ಲೇ ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ. ಶುದ್ಧ ಕುಡಿಯುವ ನೀರಿನ ಕೇಂದ್ರವನ್ನು ಕೂಡ ಸ್ಥಾಪಿಸಲಾಗಿದೆ. ಪ್ರತಿಯೊಂದು ಸೌಲಭ್ಯವೂ ಒಂದೇ ಸೂರಿನಡಿ ದೊರೆಯಬೇಕು, ಆ ಮೂಲಕ ಕೃಷಿಕ ವರ್ಗಕ್ಕೆ ಅನುಕೂಲ ಮತ್ತು ಲಾಭ ಮಾಡಿಕೊಡಬೇಕು ಎನ್ನುವುದು ನನ್ನ ಉದ್ದೇಶ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕಣಂಜಲು ಪೂವಯ್ಯ ಹಾಗೂ ನಿರ್ದೇಶಕ ಧನಂಜಯ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*