ಮಡಿಕೇರಿ ಜ.11: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಪೂರ್ವಭಾವಿ ಸಭೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗಿನ ಎರಡು ಕ್ಷೇತ್ರಗಳಲ್ಲಿ SDPI ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ರೂಪರೇಷ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಕ್ಷದ ಜಿಲ್ಲಾಧ್ಯಕ್ಷ ಕಲೀಲ್ ಮಡಿಕೇರಿ, ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮದ್, ರಾಜ್ಯ ಸಮಿತಿ ಸದಸ್ಯ ನವಾಸ್ ಉಳ್ಳಾಲ್, ಪ್ರಮುಖರಾದ ಮನ್ಸೂರ್, ಅಮೀನ್ ಮೊಹಿಸಿನ್, ಅಬ್ದುಲ್ಲಾ ಅಡ್ಕಾರ್, ಮುಸ್ತಫಾ ಮಡಿಕೇರಿ, ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಸುಂಟಿಕೊಪ್ಪ ಸಭೆಯಲ್ಲಿ ಇದ್ದರು.