ಮಡಿಕೇರಿ ಜ.12 : ಮದವೇರಿದ ಕಾಡಾನೆ ದಾಳಿ ಮಾಡಿದ ಪರಿಣಾಮ ಸಾಕಾನೆ ತೀವ್ರ ಗಾಯಗೊಂಡ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ.
ಶಿಬಿರದ ಸಾಕಾನೆ ಗೋಪಿ ಗಾಯಗೊಂಡಿದ್ದು, ವನ್ಯಜೀವಿ ತಜ್ಞರು ಚಿಕಿತ್ಸೆ ನೀಡುತ್ತಿದ್ದಾರೆ.
ಕಾಡಾನೆ ಚಲನವಲನ ಶಿಬಿರದ ಬಳಿಯೇ ಇರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಸಾಕಾನೆ ಶಿಬಿರಕ್ಕೆ ಎರಡು ದಿನ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ.
ಮಡಿಕೇರಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ.ಶಿವರಾಮ್ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಕಾಡಾನೆಯನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.













