ಮಡಿಕೇರಿ ಜ.12 : “ಗ್ರಾಮ ಒನ್” ಯೋಜನೆಯನ್ನು ರಾಜ್ಯದ ಜಿಲ್ಲೆಗಳಲ್ಲಿ ಈಗಾಗಲೇ ಮುಖ್ಯಮಂತ್ರಿ ಅವರು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಲೋಕಾರ್ಪಣೆಗೊಳಿಸಿದ್ದು, ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ 12 ಗ್ರಾಮ ಪಂಚಾಯತ್‍ಗಳಲ್ಲಿ (ಗ್ರೇಡ್-2ರಡಿ) ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯ ದೊಡ್ಡಮಳ್ತ್ತೆ, ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ, ಸೋಮವಾರಪೇಟೆ ಹೋಬಳಿಯ ಗರ್ವಾಲೆ, ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಕೆದಕಲ್, ಕುಶಾಲನಗರ ಹೋಬಳಿಯ ನಾಲ್ಕೂರು ಶಿರಂಗಾಲ, ವಿರಾಜಪೇಟೆ ತಾಲೂಕಿನ ಕಾಕೋೀಟುಪರಂಬು, ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ನಿಟ್ಟೂರು ಹಾಗೂ ಪೊನ್ನಪ್ಪಸಂತೆ, ಹುದಿಕೇರಿ ಹೋಬಳಿಯ ಬಲ್ಯಮಂಡೂರು, ಶ್ರೀಮಂಗಲ ಹೋಬಳಿಯ ಕೆ.ಬಾಡಗ, ಪೊನ್ನಂಪೇಟೆ ಹೋಬಳಿಯ ಬಿ.ಶೆಟ್ಟಿಗೇರಿ ಹಾಗೂ ಕಿರುಗೂರು.
ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಅಥವಾ ಕೋ-ಆರ್ಡಿನೇಟರ್, ಜಿಲ್ಲಾಧಿಕಾರಿ ಅವರ ಕಚೇರಿ (ದೂರವಾಣಿ ಸಂಖ್ಯೆ: 8861672120/ 8553226664) ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*