ಚೆಟ್ಟಳ್ಳಿ ಜ.12 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯಲ್ಲಿ ಪ್ರತಿಷ್ಠಾಪಿಸಲಿರುವ ಶ್ರೀಪಂಚಮುಖಿ ವಾಯುಪುತ್ರಮೂರ್ತಿಯನ್ನು ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಚೆಟ್ಟಳ್ಳಿ ಗ್ರಾಮಸ್ಥರು ಪೂರ್ಣಕುಂಭ ಕಲಶದೊಂದಿಗೆ ಬರಮಾಡಿಕೊಂಡರು.
ವಿಜಯ ಪ್ಲಾಂಟೇಷನ್ ಮಾಲೀಕ ಎಸ್.ಜಿ.ಶ್ರೀನಿವಾಸ್ ಹಾಗೂ ಬಲ್ಲಾರಂಡ ಮಣಿಉತ್ತಪ್ಪ ವಿಶೇಷ ಪೂಜೆ ಸಲ್ಲಿಸಿದರು. ಚೆಟ್ಟಳ್ಳಿ ಶ್ರೀನರೇಂದ್ರ ಮೋದಿ ರೈತ ಸಹಕಾರ ಭವನದಿಂದ ಸಹಕಾರ ಸಂಘದ ಮುಖ್ಯ ಕಚೇರಿಯವರೆಗೆ ಪಟ್ಟಣದುದ್ದಕ್ಕೂ ಮೆರವಣಿಗೆಯಲ್ಲಿ ಸಾಗಿ ಕಾವೇರಿಮಾತೆಗೆ, ಪಶುಪತಿನಾಥನಿಗೆ ಪೂಜೆ ಸಲ್ಲಿಸಲಾಯಿತು. ನಂತರ ಈರಳೆವಳಮುಡಿ ಶಾಖೆಗೆ ಕೊಂಡೊಯ್ಯಲಾಯಿತು.
ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಶ್ರೀ ಪಂಚಮುಖಿ ವಾಯುಪುತ್ರಮೂರ್ತಿಯನ್ನು ಪ್ರತಿಷ್ಠಾಪಿಸುತಿದ್ದೇವೆ. ಸಂಕ್ರಾತಿ ದಿನವಾದ ಜ.15ರಂದು ವಿವಿಧ ಪೂಜಾಕೈಂರ್ಕದೊಂದಿಗೆ ಸಂಘದ ಈರಳೆವಳಮುಡಿ ಶಾಖೆಯ ಆವರಣದಲ್ಲಿ ಅನಾವರಣಗೊಳಿಸುವುದಾಗಿ ಮಣಿಉತ್ತಪ್ಪ ತಿಳಿಸಿದರು.
ಈ ಸಂದರ್ಭ ವೀರಾಂಜನೆಯ ಯುವಕ ಸಂಘದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ, ಗೌರಿಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಪುತ್ತರಿರ ಶಿವುನಂಜಪ್ಪ, ಕಾರ್ಕಳದ ಶಿಲ್ಪಿ ಗುಣವಂತೇಶ್ವರ ಭಟ್, ಚೆಟ್ಟಳ್ಳಿ ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು ಪೂವಯ್ಯ, ನಿರ್ದೇಶಕರುಗಳಾದ ಪುತ್ತರಿರ ಎಂ.ಸೀತಮ್ಮ, ಅಡಿಕೇರ ಜಯಾ, ಕಾಶಿ, ಧನಂಜಯ, ಆಂತರಿಕ ಲೆಕ್ಕ ಪರಿ ಶೋಧಕ ಹೆಚ್.ಬಿ.ರಮೇಶ್, ಮುಖ್ಯಕಾರ್ಯನಿರ್ವಹಣಾಧಿಕಾರಿ ನಂದಿನಿ, ಸಂಘದ ಸದಸ್ಯರುಗಳು, ಸಿಬ್ಬಂದಿಗಳು ಸ್ಥಳೀಯ ವಿವಿಧ ಸಂಘ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*