ಮಡಿಕೇರಿ ಜ.12 : ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಮೈಸೂರು ಕೆ.ಆರ್.ನಗರ ನಿವಾಸಿ ಮಂಜುನಾಥ (32) ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರು 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಪತ್ತೆ ಮಾಡಿದ ಕುಶಾಲನಗರ ಗ್ರಾಮಾಂತರ ಸಿ.ಪಿ.ಐ ಹಾಗೂ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಪ್ರಶಂಸಿಸಿದ್ದಾರೆ.














