ಮಡಿಕೇರಿ ಜ.13 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಸತಿ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಎ.ಎಂ ಚೈತನ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.
ಇವಳು 100 ಮೀ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಇವರ ಸಾಧನೆಗೆ ಶಾಲಾ ಪ್ರಾಂಶುಪಾಲರು , ಶಿಕ್ಷಕ ವೃಂದ , ದೈಹಿಕ ಶಿಕ್ಷಕರು ಮತ್ತು ಮನೆಯವರು ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.