ಮಡಿಕೇರಿ ಜ.13 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯಿಂದ ಮಡಿಕೇರಿಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ದೇಶ ಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು.
ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಂಗದಾಮಯ್ಯ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಸಂದೇಶಗಳು ಯುವಜನತೆಗೆ ಸ್ಪೂರ್ತಿದಾಯಕವಾಗಿದ್ದವು. ಅವರ ಜೀವನ ಸಂದೇಶ, ತತ್ವಚಿಂತನೆಗಳು ಪ್ರತಿಯೊಬ್ಬರು ಪಾಲಿಸುವ ಅಗತ್ಯವಿದೆ ಎಂದು ಹೇಳಿದರು. ದೇಶಭಕ್ತಿಗೀತೆ ಎಂಬುದು ದೇಶಕ್ಕೆ ಗೌರವ, ಎಲ್ಲಾರಿಗೂ ಶುಭವಾಗಲಿ ಎಂದು ಹಾರೈಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ತರಬೇತಿ ಆಯುಕ್ತೆ ಮೈಥಿಲಿ ರಾವ್, ಉಪಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಖಜಾಂಚಿ ಪುಷ್ಟವೇಣಿ, ಪ್ರಮುಖರಾದ ಶೋಭಾ ಸುಬ್ಬಯ್ಯ, ಬೈತಡ ಜಾನಕ್ಕಿ, ಎಲ್ಲಾ ಶಾಲೆಯ ಶಿಕ್ಷಕರು ಹಾಜರಿದ್ದರು. ಹದಿನೆಂಟು ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿಜೇತರು : : ಸ್ಕೌಟ್ ವಿಭಾಗದಲ್ಲಿ ನಾಪೋಕ್ಲು ಅಂಕುರ್ ಪಬ್ಲಿಕ್ ಸ್ಕೂಲ್ ಪ್ರಥಮ, ನಾಪೋಕ್ಲು ಕೆ ಪಿ ಎಸ್ ದ್ವಿತೀಯ, ವಿರಾಜಪೇಟೆ ಅರಮೇರಿ ಎಸ್ ಎಂ ಎಸ್ ತೃತೀಯ. ಗೈಡ್ ವಿಭಾಗದಲ್ಲಿ ಮಡಿಕೇರಿ ಸಂತ ಮೈಕಲರ ಕನ್ನಡ ಮಾಧ್ಯಮ ಶಾಲೆ ಪ್ರಥಮ, ವಿರಾಜಪೇಟೆ ಅರಮೇರಿ ಎಸ್ ಎಂ ಎಸ್ ದ್ವಿತೀಯ, ಮಡಿಕೇರಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆ ತೃತೀಯ.
ಕಬ್ ವಿಭಾಗದಲ್ಲಿ ಕಡಗದಾಳು ಸ.ಹಿ ಪ್ರಾಥಮಿಕ ಶಾಲೆ ಪ್ರಥಮ, ಮಡಿಕೇರಿ ಸಂತ ಜೋಸೆಫ್ ಕನ್ನಡ ಮಾಧ್ಯಮ ಶಾಲೆ ದ್ವಿತೀಯ. ಬುಲ್ ಬುಲ್ಸ್ ವಿಭಾಗದಲ್ಲಿ ಮಡಿಕೇರಿ ಸಂತ ಜೋಸೆಫರು ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ದ್ವಿತೀಯ ಸ್ಥಾನ ಪಡೆದುಕೊಂಡಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮದಾನಕರ ಬಹುಮಾನ ಮತ್ತು ಪ್ರಶಸ್ತಿ ಪತ್ರನನ್ನು ನೀಡಿದರು. ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ ಸರ್ವರನ್ನು ವಂದಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಂ.ವಸಂತಿ ಕಾರ್ಯಕ್ರಮ ನಿರೂಪಣೆ ಮಾಡಿದರು.