Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸಂಕ್ರಾಂತಿ ಹಬ್ಬದ ಸಂಭ್ರಮ : ಸೂರ್ಯನು ಮಕರರಾಶಿಯನ್ನು ಪ್ರವೇಶಿಸುವ ಗಳಿಗೆಯೇ “ಮಕರ ಸಂಕ್ರಾಂತಿ”
ಇತ್ತೀಚಿನ ಸುದ್ದಿಗಳು

ಸಂಕ್ರಾಂತಿ ಹಬ್ಬದ ಸಂಭ್ರಮ : ಸೂರ್ಯನು ಮಕರರಾಶಿಯನ್ನು ಪ್ರವೇಶಿಸುವ ಗಳಿಗೆಯೇ “ಮಕರ ಸಂಕ್ರಾಂತಿ”

January 13, 20233 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.13 :  ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.

:: ಜ್ಯೋತಿಷ್ಯದ ತಳಹದಿ ::
ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ್ಯ.
ಈ ಶಾಸ್ತ್ರದಂತೆ, ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ”ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು.
ಈಗ ಉತ್ತರಾಯಣ ಡಿಸೆಂಬರ್ 22ಕ್ಕೇ ಆದರೂ, ಹಿಂದಿನಂತೆಯೇ ಜನವರಿ 14 ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ. ಮಹಾಭಾರತದ ಕತೆಯಲ್ಲಿ ಇಚ್ಚಾ ಮರಣಿಯಾದ. ಭೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವಿದೆ. ಸಂಪರ್ಕದ ಹೆಸರು.
:: ಕರ್ನಾಟಕದಲ್ಲಿ ಆಚರಣೆ ::
ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ.
(ಕರ್ನಾಟಕದ ರೈತರಿಗೆ ಸುಗ್ಗಿ (ಸುಗ್ಗಿ) ಅಥವಾ ಸುಗ್ಗಿಯ ಹಬ್ಬ. )ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು (ಮಕ್ಕಳು ಮತ್ತು ಹದಿಹರೆಯದವರು) ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ. ಕಬ್ಬು ಈ ಭಾಗಗಳಲ್ಲಿ ಪ್ರಧಾನ, ಏಕೆಂದರೆ ಹಬ್ಬದ ಋತುವಿನ ಸುಗ್ಗಿಯನ್ನು ಸೂಚಿಸುತ್ತದೆ. ಕರ್ನಾಟಕದ ಕೆಲವು ಭಾಗಗಳಲ್ಲಿ, ಹೊಸದಾಗಿ ಮದುವೆಯಾದ ಮಹಿಳೆಯರು ಮದುವೆಯ ಮೊದಲ ವರ್ಷದಿಂದ ಐದು ವರ್ಷಗಳ ಕಾಲ ಬಾಳೆಹಣ್ಣುಗಳನ್ನು ಮುತ್ತೈದೆÉಯರಿಗೆ ನೀಡುವ ಸಂಪ್ರದಾಯವಿದೆ. ಬಾಳೆಹಣ್ಣುಗಳ ಸಂಖ್ಯೆಯನ್ನು ಪ್ರತಿವರ್ಷ ಐದರಿಂದ ಹೆಚ್ಚಿಸಲಾಗುತ್ತದೆ. ಉತ್ತರ ಕರ್ನಾಟಕದಲ್ಲಿ, ಸಮುದಾಯದ ಸದಸ್ಯರೊಂದಿಗೆ ಗಾಳಿಪಟ ಹಾರಿಸುವ ಸಂಪ್ರದಾಯವಿದೆ.
ಮಹಿಳೆಯರು ಗುಂಪು ಗುಂಪಾಗಿ ರಂಗೋಲಿಯನ್ನು ಬಿಡಿಸುವುದು ಸಂಕ್ರಾಂತಿ ಹಬ್ಬದ ಮತ್ತೊಂದು ವಿಶೇಷವಾಗಿದೆ. ದನಕರುಗಳನ್ನು ಸಿಂಗರಿಸುವುದು ಮತ್ತು ಮೆರವಣಿಗೆ ಮಾಡುವುದು ಇನ್ನೊಂದು ಧಾರ್ಮಿಕ ಪದ್ಧತಿಯಾಗಿದೆ. ಅವುಗಳನ್ನು “ಕಿಚ್ಚು ಹಾಯಿಸುವುದು” ಹಳ್ಳಿಗಳಲ್ಲಿ ಸಾಮಾನ್ಯವಾಗಿದೆ.

:: ತಮಿಳುನಾಡಿನಲ್ಲಿ ಪೊಂಗಲ್ ::
ತಮಿಳುನಾಡಿನಲ್ಲಿ ಈ ಹಬ್ಬವನ್ನು “ಪೊಂಗಲ್” ಎಂದು ಕರೆಯುತ್ತಾರೆ. ಇಲ್ಲಿ ನಾಲ್ಕು ದಿನಗಳ ಕಾಲ ಹಬ್ಬವನ್ನು ಆಚರಿಸುತ್ತಾರೆ. ಭೋಗಿ ಎಂದರೆ ಹೊಸ ಬಟ್ಟೆಗಳನ್ನು ತೊಡುವುದು, “ಪೊಂಗಲ್” ಎಂದರೆ ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆ. ಮಾಟ್ಟು ಪೊಂಗಲ್ ಎಂದರೆ ಗೋಪೂಜೆ ಎಂದು ಅರ್ಥ. ಕೆಲವು ಕಡೆಗಳಲ್ಲಿ “ಜಲ್ಲಿಕಟ್ಟು” ಎಂಬ ಗೂಳಿ ಪಳಗಿಸುವ ಆಟ ನಡೆಯುತ್ತದೆ. ಹೀಗೆ ತಮಿಳುನಾಡಿನಲ್ಲಿ ನಾಲ್ಕು ದಿನ ಹಬ್ಬ ನಡೆಯುತ್ತದೆ.

:: ಕೇರಳದ ಶಬರಿಮಲೆ ::
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಲೇ ಲಕ್ಷೋಪಲಕ್ಷ ಭಕ್ತರು ಈ ಜ್ಯೋತಿಯ ದರ್ಶನಕ್ಕಾಗಿ ವಷರ್ಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ. “ಮಕರ ವಿಳಕ್ಕು”ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ.

ಒಟ್ಟಿನಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯು, ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಮಕರ ಸಂಕ್ರಾಂತಿ ಹಬ್ಬ ಪ್ರೇರಣೆಯನ್ನು ನೀಡುತ್ತದೆ.

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಹಬ್ಬವನ್ನು ಆಚರಿಸಲಾಗುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನ ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವಿದೆ. ಮಹಾರಾಷ್ಟ್ರದಲ್ಲಿಯೂ ಎಳ್ಳು ಮತ್ತು ಸಕ್ಕರೆಯ ಕುಸುರಿಕಾಳನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಎಳ್ಳಿನ ಉಂಡೆಗಳನ್ನು ಹಂಚುತ್ತಾರೆ. ಕರ್ನಾಟಕದ ಸಂಪ್ರದಾಯದ ತರಹ ಬಿಡಿ ಕಾಳುಗಳನ್ನು ಹಂಚುವ ಪದ್ಧತಿಯಿಲ್ಲ. ಎಳ್ಳುಂಡೆ ಕೊಡುವಾಗ ತಪ್ಪದೆ, “ತಿಳ್ಗುಳ್ ಘ್ಯಾ, ಅಣಿ ಗೋಡ್ ಗೋಡ್ ಬೋಲ” (ಅಂದರೆ ಎಳ್ಳು ಬೆಲ್ಲ ತೆಗೆದುಕೊಂಡು ಒಳ್ಳೊಳ್ಳೆಯ ಮಾತಾಡಿ) ಎನ್ನುವ ಮಾತು ಹೇಳುವುದನ್ನು ಮರೆಯುವುದಿಲ್ಲ. ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಗೆ “ಲೋಹರಿ” ಎಂದು ಹೆಸರು.
ಸಂಕ್ರಾಂತಿ ಹಬ್ಬ ಸರ್ವರಿಗೂ ಶುಭವನ್ನು ತರಲಿ ಎನ್ನುವುದು ನಮ್ಮ ಹಾರೈಕೆ.

Share. Facebook Twitter Pinterest LinkedIn Tumblr Email WhatsApp
Previous Articleಜಿಲ್ಲಾ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ
Next Article ವಿರಾಜಪೇಟೆ : ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಶಾಸಕ ಕೆ.ಜಿ.ಬೋಪಯ್ಯ ಮನವಿ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.