ಮಡಿಕೇರಿ ಜ.13 : ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಇದೇ ಜ.25 ರ ಒಳಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜ.31 ರಂದು ರಾಜ್ಯವ್ಯಾಪಿ ನಮ್ಮೆಲ್ಲ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ‘ವಿಧಾನಸೌಧ’ ಮುತ್ತಿಗೆ ಮತ್ತು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿರುವುದಾಗಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ. ಈರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೊರಗುತ್ತಿಗೆ ನೌಕರರನ್ನು ಮಲತಾಯಿ ಧೋರಣೆಯಿಂದ ನಡೆಸಿಕೊಳ್ಳುತ್ತಿದ್ದು, ಈ ಬಾರಿ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ನೀರು ಸರಬರಾಜು, ಡಾಟಾ ಆಪರೇಟರ್‍ಗಳು, ಸ್ವಚ್ಛತಾ ಕಾರ್ಯದಲ್ಲಿ ನಿರತ ಕಾರ್ಮಿಕರು ತಮ್ಮ ಕೆಲಸವನ್ನು ಪ್ರತಿಭಟನೆಯ ಸಂದರ್ಭ ಸ್ಥಗಿತಗೊಳಿಸಲಿದ್ದಾರೆ. ಸಾರ್ವಜನಿಕರು ನಮ್ಮ ಸಂಕಷ್ಟಗಳನ್ನು ಅರಿತು ಸಹಕರಿಸುವಂತೆ ಮನವಿ ಮಾಡಿಕೊಂಡರು.
ಪೌರಕಾರ್ಮಿಕರ ನೇರ ನೇಮಕಾತಿಯನ್ನು ಸ್ವಾಗತಿಸುತ್ತೇವೆ. ಆದರೆ, ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜುದಾರರು, ಡಾಟಾ ಅಪರೇಟರ್ಸ್, ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್‍ಗಳು ಸೇರಿದಂತೆ 15 ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಸರಕಾರಕ್ಕೆ ಶೋಭೆ ತರಲಾರದೆಂದು ತೀಕ್ಷ್ಣವಾಗಿ ನುಡಿದರು.
ನಗರ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲೆ ಉಳಿಸಲಾಯಿತು. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲೆ ಮುಂದುವರಿಸುವ ಸರಕಾರದ ನೀತಿ ಖಂಡನೀಯ ಎಂದರು.
ಕೊಡಗು ಜಿಲ್ಲೆಯಲ್ಲಿ 72 ಮಂದಿ ಹೊರಗುತ್ತಿಗೆ ನೌಕರರಿದ್ದು, 21 ಮಂದಿಯನ್ನು ಮಾತ್ರ ಖಾಯಂಗೊಳಿಸಲಾಗಿದೆ. ಹೊರಗುತ್ತಿಗೆ ನೌಕರರ ನ್ಯಾಯಬದ್ದ ಹಕ್ಕಿಗಾಗಿ ಆಗ್ರಹಿಸುವುದು ನಮ್ಮ ಹಕ್ಕಾಗಿದೆಯೆಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎ.ಎ.ಬೋಪಣ್ಣ, ಸಂಚಾಲಕ ಕೆ.ಎಸ್.ಮಹದೇವಪ್ಪ, ಕಾರ್ಯದರ್ಶಿ ಟಿ.ಬಿ.ರಮೇಶ್ ಕುಟ್ಟಪ್ಪ, ಖಜಾಂಚಿ ಎಂ.ಎ.ಅಹಮ್ಮದ್ ಕಬೀರ್, ನೀರು ಸರಬರಾಜು ವಿಭಾಗದ ಜಿಲ್ಲಾಧ್ಯಕ್ಷ ಶಿವಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*