ಮಡಿಕೇರಿ ಜ.13 : ಕೊಡಗು ಜಿಲ್ಲೆಯಲ್ಲಿರುವ ತುಳುನಾಡಿನ ದೈವಸ್ಥಾನದ ಹೆಸರು, ಊರು, ದೈವ ನರ್ತಕರು, ದೈವ ಆರಾಧಕರು ಮತ್ತು ದೈವ ಸಂಪ್ರದಾಯದ ಮಾಹಿತಿಯನ್ನೊಳಗೊಂಡ ದಾಖಲೀಕರಣದ ಪುಸ್ತಕವನ್ನು ಹೊರ ತರುವ ಯೋಜನೆಯನ್ನು ರೂಪಿಸುವ ಅಗತ್ಯವಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ ತಿಳಿಸಿದ್ದಾರೆ.
ನಗರದ ಬಾಲಭವನದ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ದೈವ ಆರಾಧಕರು ಹಾಗೂ ದೈವ ನರ್ತಕರ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಂಡು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತುಳುನಾಡಿನ ದೈವಾರಾಧನೆಯ ಬಹಳಷ್ಟು ದೈವ ಕ್ಷೇತ್ರಗಳಿವೆ. ದೈವ ಆರಾಧಕರು ಹಾಗೂ ದೈವ ನರ್ತಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ದೈವ ಮತ್ತು ದೈವಾರಾಧನೆಯನ್ನು ಅವಮಾನಿಸುವ, ದೈವದ ಬಗ್ಗೆ ಅಪಹಾಸ್ಯ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅಗತ್ಯವಿದೆ. ಶಾಲಾ, ಕಾಲೇಜು ಸೇರಿದಂತೆ ಖಾಸಗಿ ಕಾರ್ಯಕ್ರಮಗಳಲ್ಲಿ ದೈವದ ವೇಷಭೂಷಣ ತೊಟ್ಟು ಪಾತ್ರ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದರು.
ಸರಕಾರದ ಆದೇಶದಂತೆ ದೈವ ಆರಾಧಕರು, ದೈವ ನರ್ತಕರಿಗೆ ಮಾಸಾಶನ ನೀಡುವ ಕಾರ್ಯ ಈಗಾಗಲೇ ದಕ್ಷಿಣ ಕನ್ನಡದಲ್ಲಿ ಆರಂಭಗೊoಡಿದ್ದು, ಕೊಡಗು ಜಿಲ್ಲೆಯ ಫಲಾನುಭವಿಗಳಿಗೆ ಮಾಹಿತಿ ನೀಡುವ ಕೆಲಸ ಆಗಬೇಕು. ಜಿಲ್ಲೆಯ ದೈವಸ್ಥಾನದ ಅಭಿವೃದ್ಧಿಗೆ ಸರಕಾರಕ್ಕೆ ಮನವಿ ಸಲ್ಲಿಸುವುದು. ದೈವದ ಸೇವೆ, ಕೋಲ, ನೇಮೋತ್ಸವವನ್ನು ಕ್ರಮ ಬದ್ಧವಾಗಿ ನಡೆಸಲು ಮಾರ್ಗದರ್ಶನ ನೀಡುವುದು. ವರ್ಷಕ್ಕೊಮ್ಮೆ ದೈವ ಆರಾಧಕರ ದೈವ ನರ್ತಕರ ಕುಟುಂಬದ ಎಲ್ಲಾ ಸದಸ್ಯರೊಂದಿಗೆ ಕಾರ್ಯಕ್ರಮ ಆಯೋಜಿಸಿ ತುಳುನಾಡಿನ ಜಾನಪದ ವಿದ್ವಾಂಸರಿAದ ಧಾರ್ಮಿಕ ಉಪನ್ಯಾಸ ಹಾಗೂ ಮಾಹಿತಿ ವಿನಿಮಯ ಕಾರ್ಯಕ್ರಮಗಳನ್ನು ನಡೆಸುವುದು. ಜಿಲ್ಲೆಯಲ್ಲಿ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ರಚಿಸವುದರಿಂದ ಪ್ರತಿ ಉದ್ದೇಶಗಳನ್ನು ಈಡೇರಿಸಲು ಸಹಕಾರಿಯಾಗಲಿದೆ ಹಾಗೂ ಸಂಕಷ್ಟಕ್ಕೆ ಸ್ಪಂದನೆ ದೊರೆಯಲಿದೆ ಎಂದು ರವಿ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗದ ದೈವ ಆರಾಧಕರಾದರ ರಮೇಶ್ ಪೂಜಾರಿ, ಉಮೇಶ್ ಕೆದಕಲ್, ರಾಜೇಶ್ ಒಂಟಿ ಅಂಗಡಿ, ಮುತ್ತಪ್ಪ ಪೂಜಾರಿ ಮಕ್ಕಂದೂರು, ಸದಾಶಿವ ರೈ ತಾಳತ್ತಮನೆ, ಕೃಷ್ಣಪ್ಪ ಹೆಬ್ಬೆಟ್ಟಗೇರಿ, ಲೋಹಿತ್ ಹೆಬ್ಬೆಟ್ಟಗೇರಿ, ಪೂವಪ್ಪ ಗರಗಂದೂರು, ಪವನ್ ಮರಗೋಡು, ದೇವಪ್ಪ ಕೊಯಿನಾಡು, ಗುರುವ ಮಂಜಿಕೆರೆ, ಕೋಟಿ ಪೂಜಾರಿ, ಜನಾರ್ಧನ, ರಾಜು ರೈ ಸುಂಟಿಕೊಪ್ಪ, ದಿನೇಶ್ ಉಡೋತ್, ಪವನ್ ಪೂಜಾರಿ, ಲವನ್ ಪೂಜಾರಿ, ಪಾಪು ರವಿ, ಸಂತೋಷ್ ಸೇರಿದಂತೆ ಅನೇಕರು ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*