ಮಡಿಕೇರಿ ಜ.14 : ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ, ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿ ಇಂಗ್ಲೀಷ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಂಖ್ಯಾಶಾಸ್ತ್ರ, ಕೊಡವ ಭಾಷೆ ವಿಷಯಗಳಿಗೆ ಜ.16 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ನೇರ ಸಂದರ್ಶನ ನಡೆಯಲಿದೆ.
ಇಂಗ್ಲೀಷ್ ಬೆಳಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆ ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ, ಸಂಖ್ಯಾ ಶಾಸ್ತ್ರ ಮಧ್ಯಾಹ್ನ 12.30 ಗಂಟೆಯಿಂದ 1.30 ಗಂಟೆಯವರೆಗೆ ಹಾಗೂ ಕೊಡವ ಭಾಷೆ ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಹೊಂದಿದ್ದು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕಗಳು), ಯುಜಿಸಿ, ಎನ್‍ಇಟಿ/ ಎಸ್‍ಎಲ್‍ಇಟಿ ಉತ್ತೀರ್ಣತೆ, ಎಂ.ಫಿಲ್/ ಪಿಎಚ್‍ಡಿ ಪದವಿ ಪ್ರಮಾಣಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಜರಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.















