ಮಡಿಕೇರಿ ಜ.14 : ನಿವೃತ್ತ ರಾಜ್ಯ ಸರ್ಕಾರಿ ನೌಕರರ ‘ಪಿಂಚಣಿ ಅದಾಲತ್’ ಜನವರಿ, 24 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕುಂದು ಕೊರತೆಗಳೇನಾದರೂ ಇದ್ದಲ್ಲಿ, ನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲುಗಳನ್ನು ಸೂಕ್ತ ದಾಖಲೆಗಳೊಂದಿಗೆ ಜನವರಿ, 20 ರೊಳಗೆ ಕೊಡಗು ಜಿಲ್ಲೆಯ ಸಹಾಯಕ ನಿರ್ದೇಶಕರು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ, ಕೊಠಡಿ ಸಂಖ್ಯೆ 06, ಜಿಲ್ಲಾಡಳಿತ ಭವನ, ಮಡಿಕೇರಿ ಅವರಿಗೆ ಸಲ್ಲಿಸಲು ಹಾಗೂ ಅದಾಲತ್‍ನಲ್ಲಿ ಭಾಗವಹಿಸುವಂತೆ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.









