ಮಡಿಕೇರಿ ಜ.14 : ಪ್ರಸಕ್ತ(2022-23) ಸಾಲಿನಲ್ಲಿ ಪಜಾತಿ ಮತ್ತು ಪ.ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ, ನೀಟ್ ಲಾಂಗ್ ಟರ್ಮ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಜನವರಿ, 31 ರೊಳಗೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 08272-22553, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.















