ಮಡಿಕೇರಿ ಜ.14 : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಪಣೀಂದ್ರ ಅವರು ಜನವರಿ, 21 ಮತ್ತು 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.21 ರಂದು ಬೆಳಗ್ಗೆ 10.30 ರಿಂದ 1.30 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಮಾಡಲಿದ್ದಾರೆ.
ಹಾಗೆಯೇ ಜನವರಿ, 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರು ಮಾಡಿಕೊಡಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ/ ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ನ್ಯಾಯಮೂರ್ತಿ ಅವರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ಮೂಲಕ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬಹುದು.
ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹಾಗೂ ದೂರುದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗುವಂತೆ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರಾದ ಎಂ.ಎಸ್.ಪವನ್‍ಕುಮಾರ್ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*