ಮಡಿಕೇರಿ ಜ.14 : ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯಲ್ಲಿ ಜ.28 ರಂದು ನಡೆಯುವ 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೆಕಲ್ಲು ನವೀನ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧ್ಯಕ್ಷ ಕೇಶವಕಾಮತ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಡಾ.ವಿಜಯ್ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಕಸಾಪ ಗೌರವ ಕಾರ್ಯದರ್ಶಿಗಳಾದ ಮುನೀರ್ ಅಹಮ್ಮದ್, ಪುದಿಯನೆರವನ ರೇವತಿ ರಮೇಶ್, ಪುದಿಯನೆರವನ ರಿಶಿತ್ ಮಾದಯ್ಯ, ಮಡಿಕೇರಿ ತಾಲ್ಲೂಕು ಗೌರವ ಕಾರ್ಯದರ್ಶಿ ಕೆ.ಯು.ರಂಜಿತ್, ತುಳಸಿ ಮೋಹನ್, ಸಂಘಟನಾ ಕಾರ್ಯದರ್ಶಿ ತಳೂರು ದಿನೇಶ್, ಸಮ್ಮೇಳನದ ಮೇಲುಸ್ತುವಾರಿ ಸದಸ್ಯ ಚಂದ್ರಶೇಖರ್, ನಿರ್ದೇಶಕರುಗಳಾದ ಶ್ರೀಧರ್, ಹರೀಶ್ ಸರಳಾಯ, ಮಂಜುನಾಥ್, ಅಬ್ದುಲ್ಲ, ಪ್ರಕಾಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
::: ಡಾ.ವಿಜಯ್ ಪೂಣಚ್ಚ ಸಾಧನೆ :::
26 ವರ್ಷಗಳಿಂದ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕ. ಮಂಗಳೂರು ವಿಶ್ವವಿದ್ಯಾಲಯದಲ್ಲಿ Jamma system in Kodagu : its socio-economic Dimensions (1800-1980) ಎಂಬ ವಿಷಯ ಕುರಿತು ಪಿಎಚ್.ಡಿ ಅಧ್ಯಯನ ಕೈಗೊಂಡಿದ್ದಾರೆ.
ಮೇಕ್ ಅರ್ಥರ್ ಫೌಂಡೇಶನ್ಸ್, ಯುನೆಸ್ಕೊ, ಫ್ರೆಂಚ್ ಇನ್ಸ್ ಟಿಟ್ಯೂಟ್ ಆಫ್ ಪಾಂಡಿಚೇರಿಯಿಂದ ಕೈಗೊಂಡ ಬಯೋಡೈವರ್ಸಿಟಿ ಆಫ್ ವೆಸ್ಟರ್ನ್ ಘಾಟ್ಸ್ ಎನ್ನುವ ಯೋಜನೆಯಲ್ಲಿ Jamma land and Jamma Malai System ಎಂಬ ವಿಷಯ ಕುರಿತು ಸಮಾಜ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಕಾಮನ್ ವೆಲ್ತ್ ಫೆಲೋ ಆಗಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟರಲ್ ಸಂಶೋಧನೆ. ನಂತರ ಪೋಸ್ಟ್ ಡಾಕ್ಟರಲ್ ಪ್ರಬಂಧವನ್ನು Conflicting Identities in Karnataka: Separate and Anti Separatist Movements in Coorg ಎನ್ನುವ ಹೆಸರಿನಲ್ಲಿ ಕೃತಿಯ ರೂಪದಲ್ಲಿ ಪ್ರಕಟಿಸಲಾಗಿದೆ.
ಸಮಾಜ ವಿಜ್ಞಾನಗಳ ಪಠ್ಯಪುಸ್ತಕಗಳ ಪಠ್ಯರಚನೆಯ ಕರಿಕ್ಯುಲಂ ಸಮಿತಿಯ ಅಧ್ಯಕ್ಷ ಹಾಗೂ 8ನೇ ತರಗತಿಯ ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರಾಗಿ, 10ನೇ ತರಗತಿಗೆ 1837ರ ಅಮರಸುಳ್ಯ ಸಂಗ್ರಾಮ ಎನ್ನುವ ಪಠ್ಯದ ಲೇಖಕರಾಗಿ ಕಾರ್ಯನಿರ್ವಹಣೆ, ಕನ್ನಡ ವಿಶ್ವವಿದ್ಯಾಲಯದ ಡೀನ್, ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
ಪ್ರಸ್ತುತ ಚರಿತ್ರೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚರಿತ್ರೆ ವಿಶ್ವಕೋಶ, ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ಸಂಪುಟಗಳು, ಜರ್ನಲ್ ಆಫ್ ಕರ್ನಾಟಕ ಸ್ಟಡೀಸ್, ಚರಿತ್ರೆ ಅಧ್ಯಯನಗಳ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಣೆ. ಕೊಡಗಿಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ಕೃತಿಗಳ ಪ್ರಕಟಣೆ. 2007 ರಲ್ಲಿ ಅಮರಸುಳ್ಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದ ಆಯೋಜನೆ ಮಾಡಿದ್ದಾರೆ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*