ಮಡಿಕೇರಿ ಜ.14 : ಕೊಡವ ಒಕ್ಕಡೊಕ್ಕಡ ಕೇರ್ ಬಲಿ ನಮ್ಮೆ- ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಚೆಟ್ಟಂಗಡ ಕಪ್-2023 ಕ್ರೀಡಾಕೂಟದ ಲೋಗೋ ಬಿಡುಗಡೆ ಕಾರ್ಯಕ್ರಮವು ಜ.16 ರಂದು ನಡೆಯಲಿದೆ.
ನೆಮ್ಮಲೆಯ ಚೆಟ್ಟಂಗಡ ಕುಟುಂಬದ ಐನ್ಮನೆಯಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜ ಕುಶಾಲಪ್ಪ ಲೋಗೊ ಅನಾವರಣಗೊಳಿಸಲಿದ್ದಾರೆ.
ಅಧ್ಯಕ್ಷತೆಯನ್ನು ಚೆಟ್ಟಂಗಡ ಒಕ್ಕದ ಸಮಿತಿ ಅಧ್ಯಕ್ಷ ಚೆಟ್ಟಂಗಡ ವಿಜಯ ಕಾರ್ಯಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಹಾಕಿ ಅಕಾಡೆಮಿ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಕೊಡವ ಟಗ್ ಆಫ್ ವಾರ್ ಅಕಾಡೆಮಿ ಅಧ್ಯಕ್ಷ ಪೊನ್ನೋಲತಂಡ ಕಿರಣ್ ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ.