ಮಡಿಕೇರಿ ಜ.14 : ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಏಕೈಕ ಪುತ್ರಿ ಮಿರೇಲ್ ಚಂಗಪ್ಪ(86) ಅವರು ಶನಿವಾರ ಬೆಂಗಳೂರಿನಲ್ಲಿ ವಿಧಿವಶವಾದರು.
ಬೆಂಗಳೂರಿನಲ್ಲಿ ನೆಲೆಸಿದ್ದ ಕೊಂಗೆಟ್ಟಿರ ಮೇಜರ್ ಚಂಗಪ್ಪ ಅವರ ಪತ್ನಿ ಮಿರೇಲ್ ಚಂಗಪ್ಪ ಅವರು ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು.
ಮಿರೇಲ್ ಚಂಗಪ್ಪ ಅವರು ತಾವು ಹುಟ್ಟಿ ಬೆಳೆದ ಮಡಿಕೇರಿಯ ಸನ್ನಿಸೈಡ್ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಶಕ್ಕೊಪ್ಪಿಸಿ ತಿಮ್ಮಯ್ಯ ಸ್ಮಾರಕ ಭವನ ಸ್ಥಾಪನೆಗೆ ಕಾರಣಕರ್ತರಾಗಿದ್ದರು.
::: ಶ್ರದ್ಧಾಂಜಲಿ :::
ಮಿರೇಲ್ ಚಂಗಪ್ಪ (86) ಅವರಿಗೆ ನಗರದ ತಿಮ್ಮಯ್ಯ ಸ್ಮಾರಕ ಭವನ ಸನ್ನಿಸೈಡ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮೃತರ ಭಾವಚಿತ್ರಕ್ಕೆ ತಿಮ್ಮಯ್ಯ ಸ್ಮಾರಕ ಭವನದ ವ್ಯವಸ್ಥಾಪಕ ಗೌಡಂಡ ಸುಬೇದಾರ್ ಮೇಜರ್ ತಿಮ್ಮಯ್ಯ, ನಾಯಕ್ ಸುಬೇದಾರ್ ಮೋಹನ್, ಪೊನ್ನುಕಂಡ ರಮ್ಯ ಮಾಚಯ್ಯ, ಕುಶಧರ, ಸುಭಾಷ್ ಚಂದ್ರ ಸೇರಿದಂತೆ ಭವನದ ಸಿಬ್ಬಂದಿಗಳು ಪುಷ್ಪ ನಮನ ಸಲ್ಲಿಸಿದರು.
ಮಿರೇಲ್ ಚಂಗಪ್ಪರ ಒತ್ತಾಸೆಯಂತೆ ಸ್ಮಾರಕ ಭವನ ನಿರ್ಮಾಣವಾಗಿದ್ದು, ಅವರ ಕುಟುಂಬ ವರ್ಗದವರ ಸಹಕಾರ ಅತ್ಯಂತ ಮಹತ್ವದ್ದಾಗಿತ್ತು ಎಂದು ಗೌಡಂಡ ತಿಮ್ಮಯ್ಯ ಸ್ಮರಿಸಿದರು.
ಶನಿವಾರ ತಿಮ್ಮಯ್ಯ ಸ್ಮಾರಕ ಭವನಕ್ಕೆ ಬಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಮಿರೇಲ್ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ನಮಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*