Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಅರೆಹಳ್ಳಿಯಲ್ಲಿ ಬಿಜೆಪಿ ಸಾಧನಾ ಸಮಾವೇಶ : 80ಕ್ಕೂ ಹೆಚ್ಚು ಕಾರ್ಯಕರ್ತರ ಸೇರ್ಪಡೆ
ಇತ್ತೀಚಿನ ಸುದ್ದಿಗಳು

ಅರೆಹಳ್ಳಿಯಲ್ಲಿ ಬಿಜೆಪಿ ಸಾಧನಾ ಸಮಾವೇಶ : 80ಕ್ಕೂ ಹೆಚ್ಚು ಕಾರ್ಯಕರ್ತರ ಸೇರ್ಪಡೆ

January 14, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.14: ಜನಪ್ರತಿನಿಧಿಗಳು ಚುನಾವಣೆ ಸಂದರ್ಭ ಮಾತ್ರ ರಾಜಕೀಯ ಮಾಡಬೇಕು. ನಂತರ ಕ್ಷೇತ್ರದ ಜನರೆಲ್ಲರೂ ಒಂದೇ ಎಂಬ ಭಾವನೆಯಿಂದ ಸಾಮಾಜಿಕ ಸೇವೆ ಕೈಗೊಳ್ಳಬೇಕು ಎಂದು ಶಾಸಕ ಅಪ್ಪಚ್ಚುರಂಜನ್ ಹೇಳಿದರು.

ಬೆಸೂರು ಕೆರೆಕೇರಿ ಗ್ರಾಮದ ಅರೆಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದನಂತರ ರಾಜಕೀಯವನ್ನು ಬದಿಗಿಟ್ಟು ಜನಸೇವಕರೆಂಬ ಕಾಳಜಿಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ ಎಂದರು.
94 ಸಿ ಮತ್ತು 94 ಸಿಸಿ ಅಡಿಯಲ್ಲಿ ಕ್ಷೇತ್ರದಲ್ಲಿ 7,500 ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. 12,000 ಮಂದಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಾಗಕ್ಕೆ ಹಕ್ಕುಪತ್ರ ನೀಡಲಾಗಿದೆ. ಅಕಾಲಿಕ ಮಳೆಯಿಂದ ಬೆಳೆಹಾನಿಯಾದ ರೈತರಿಗೆ 113 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ರೈತ ಸಮ್ಮಾನ್ ಯೋಜನೆಯಡಿ ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕ 10 ಸಾವಿರ ಪ್ರೋತ್ಸಾಹ ಹಣ ವಿತರಿಸಲಾಗುತ್ತಿದೆ. ಉಜ್ವಲ ಯೋಜನೆಯಡಿ 10 ಕೋಟಿ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ವಿತರಿಸಲಾಗಿದೆ. ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ. ಆ ಮೂಲಕ ಬಿಜೆಪಿ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದೆ ಎಂದರು.
ಆನೆ ದಾಳಿಯಿಂದ ಮೃತರಾದರೆ ಈ ಹಿಂದೆ 50 ಸಾವಿರ ಪರಿಹಾರ ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರದವು ಪರಿಹಾರ ಹಣವನ್ನು 7.50ಲಕ್ಷಕ್ಕೆ ಏರಿಕೆ ಮಾಡಿದೆ. ಇದರೊಂದಿಗೆ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಂಡಿದ್ದು, ರೈಲ್ವೇ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಅಪ್ಪಚ್ಚು ರಂಜನ್ ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಕೊಡ್ಲಿಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು, ಕಟ್ಟಡ ನಿರ್ಮಾಣಕ್ಕಾಗಿ 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಪ್ಪಚ್ಚುರಂಜನ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಪಟೇಲರಾದ ಕೆ.ಬಿ. ವೀರಪ್ಪ ವಹಿಸಿದ್ದರು. ಪ್ರಮುಖರಾದ ರೇಣುಕಪ್ಪ, ವೀರಭದ್ರಪ್ಪ, ಬಾಬುರಾಜೇಂದ್ರ ಪ್ರಸಾದ್, ನಾಗರಾಜ್, ಪಾಲಾಕ್ಷ, ಮಹೇಶ್, ಯೋಗಪ್ಪ ಮಾಸ್ಟರ್, ಭಗವಾನ್, ಜಗದೀಶ್, ಮಳಲಿ ನಾಗೇಶ್, ಸುಮಾ ಸುದೀಪ್, ಲಾವಣ್ಯ ಮಹೇಶ್, ಕೆ.ಜಿ. ದಿನೇಶ್, ಎಸ್. ಮಹೇಶ್, ನಿವೃತ್ತ ಸೈನಿಕ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೆಸೂರು ಗ್ರಾ.ಪಂ ವ್ಯಾಪ್ತಿಯ ಕೆರೆಕೇರಿ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಸಭೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಎಸ್‍ಪಿ ಸೇರಿದಂತೆ ಇತರ ಪಕ್ಷಗಳ 80ಕ್ಕೂ ಅಧಿಕ ಕಾರ್ಯಕರ್ತರು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಕೆರೆಕೇರಿಯ ಅರೆಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಭೆಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರಾದ ವಿಎಸ್‍ಎಸ್‍ಎನ್ ನಿರ್ದೇಶಕ ಸುಬ್ರಹ್ಮಣ್ಯ ಆಚಾರ್, ಗ್ರಾ.ಪಂ. ಮಾಜೀ ಅಧ್ಯಕ್ಷೆ ರೋಹಿಣಿ ಆಚಾರ್, ಅಪ್ಸರ್, ಶಾನು, ಜಗದೀಶ್, ದೇವರಾಜ್, ಜವರಯ್ಯ, ವಸಂತ್, ನಿವೃತ್ತ ಶಿಕ್ಷಕ ಯೋಗಪ್ಪ ಸೇರಿದಂತೆ 80ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.

Share. Facebook Twitter Pinterest LinkedIn Tumblr Email WhatsApp
Previous Articleವಿ.ಎ.ನಮ್ರೀನ್ ಆಸಿಫ್ ಗೆ ಅತ್ಯುತ್ತಮ ಪತ್ರಿಕೆ ಪ್ರಶಸ್ತಿ
Next Article ಸೈನಿಕ ಶಾಲೆಗಳ ಅಂತರ ವಲಯ ವಾಲಿಬಾಲ್ ಕ್ರೀಡಾಕೂಟ : ಛತ್ತೀಸ್‍ಗಡದ ಅಂಬಿಕಾಪುರ ಸೈನಿಕ ಶಾಲೆ ಪ್ರಥಮ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.