ಸುಂಟಿಕೊಪ್ಪ,ಜ.14: ಬಿಹಾರದ ಮುಜಾರ್ಪುರ್ ಪರಸ್ ಮಹಲ್ ಗಾರ್ಡನ್ ಮೈದಾನದಲ್ಲಿ ನಡೆದ ಮೂರನೇ ಫೆಡರೇಶನ್ ಕಪ್ ಚಾಂಪಿಯನ್ ಶಿಫ್ ಸೆಸ್ಟೋ ಬಾಲ್ ಟೂರ್ನಿಯಲ್ಲಿ ಕರ್ನಾಟಕದ ಬಾಲಕಿಯರ ತಂಡ ಜಯ ಗಳಿಸಿದರೆ, ಬಾಲಕರ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಬಿಹಾರದ ಸೆಸ್ಟೋಬಾಲ್ ಪೆಡರೇಶನ್ ವತಿಯಿಂದ ಪರಸ್ ಗಾರ್ಡನ್ ಮೈದಾನದಲ್ಲಿ ಈಚೆಗೆ ನಡೆದ ರೋಮಾಂಚನಕಾರಿ ಫೈನಲ್ ಟೂರ್ನಿಯಲ್ಲಿ ಕರ್ನಾಟಕದ ಬಾಲಕಿಯರ ತಂಡವು 42-30 ಅಂಕಗಳಿಂದ ಛತ್ತಿಸ್ ಗಡ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಎತ್ತಿ ಹಿಡಿಯಿತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ಪ್ರವೇಶ ಪಡೆದಿತ್ತು. ಮತ್ತೊಂದು ಪಂದ್ಯದಲ್ಲಿ ಕರ್ನಾಟಕ ಬಾಲಕರ ತಂಡವು ಉತ್ತರಪ್ರದೇಶ ತಂಡದ ವಿರುದ್ದ 92-78 ಅಂಕಗಳಿಂದ ಸೋಲನ್ನು ಒಪ್ಪಿಕೊಂಡು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಸೋಲಿಸಿ ಫೈನಲ್ ಗೆ ಪ್ರವೇಶ ಪಡೆದಿತ್ತು. ಕೊಡಗಿನ ಕುಶಾಲನಗರದ ಜಾನ್ಸನ್ ಅವರ ತರಬೇತುದಾರರ ನೇತೃತ್ವದಲ್ಲಿ ಕೊಡಗಿನ ಶಾಹಿಲ್ ಉಸ್ಮಾನ್ ಸುಂಟಿಕೊಪ್ಪ, ಇರ್ಷಾದ್, ಸಹಲ್, ಪ್ರೀಮಿತ್, ಸುಪ್ರೀತ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*