ಸೋಮವಾರಪೇಟೆ ಜ.15 : ಜನಪ್ರತಿನಿಧಿಗಳು ಚುನಾವಣೆ ಸಂದರ್ಭ ಮಾತ್ರ ರಾಜಕೀಯ ಮಾಡಬೇಕು. ನಂತರ ಕ್ಷೇತ್ರದ ಜನರೆಲ್ಲರೂ ಒಂದೇ ಎಂಬ ಭಾವನೆಯಿಂದ ಸಾಮಾಜಿಕ ಸೇವೆ ಕೈಗೊಳ್ಳಬೇಕು ಎಂದು ಶಾಸಕ ಅಪ್ಪಚ್ಚುರಂಜನ್ ಹೇಳಿದರು.
ಸಮೀಪದ ಬೆಸೂರು ಕೆರೆಕೇರಿ ಗ್ರಾಮದ ಅರೆಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದನಂತರ ರಾಜಕೀಯವನ್ನು ಬದಿಗಿಟ್ಟು ಜನಸೇವಕರೆಂಬ ಕಾಳಜಿಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ ಎಂದರು.
94 ಸಿ ಮತ್ತು 94 ಸಿಸಿ ಅಡಿಯಲ್ಲಿ ಕ್ಷೇತ್ರದಲ್ಲಿ 7,500 ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. 12,000 ಮಂದಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಾಗಕ್ಕೆ ಹಕ್ಕುಪತ್ರ ನೀಡಲಾಗಿದೆ. ಅಕಾಲಿಕ ಮಳೆಯಿಂದ ಬೆಳೆಹಾನಿಯಾದ ರೈತರಿಗೆ 113 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ರೈತ ಸಮ್ಮಾನ್ ಯೋಜನೆಯಡಿ ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕ 10 ಸಾವಿರ ಪ್ರೋತ್ಸಾಹ ಹಣ ವಿತರಿಸಲಾಗುತ್ತಿದೆ. ಉಜ್ವಲ ಯೋಜನೆಯಡಿ 10 ಕೋಟಿ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ವಿತರಿಸಲಾಗಿದೆ. ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷಿö್ಮÃ ಯೋಜನೆ ಜಾರಿಗೆ ತರಲಾಗಿದೆ. ಆ ಮೂಲಕ ಬಿಜೆಪಿ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದೆ ಎಂದರು.
ಆನೆ ಧಾಳಿಯಿಂದ ಮೃತರಾದರೆ ಈ ಹಿಂದೆ 50 ಸಾವಿರ ಪರಿಹಾರ ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರದವು ಪರಿಹಾರ ಹಣವನ್ನು 7.50ಲಕ್ಷಕ್ಕೆ ಏರಿಕೆ ಮಾಡಿದೆ. ಇದರೊಂದಿಗೆ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಂಡಿದ್ದು, ರೈಲ್ವೇ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಅಪ್ಪಚ್ಚು ರಂಜನ್ ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಕೊಡ್ಲಿಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು, ಕಟ್ಟಡ ನಿರ್ಮಾಣಕ್ಕಾಗಿ 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಪ್ಪಚ್ಚುರಂಜನ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಪಟೇಲರಾದ ಕೆ.ಬಿ. ವೀರಪ್ಪ ವಹಿಸಿದ್ದರು. ಪ್ರಮುಖರಾದ ರೇಣುಕಪ್ಪ, ವೀರಭದ್ರಪ್ಪ, ಬಾಬುರಾಜೇಂದ್ರ ಪ್ರಸಾದ್, ನಾಗರಾಜ್, ಪಾಲಾಕ್ಷ, ಮಹೇಶ್, ಯೋಗಪ್ಪ ಮಾಸ್ಟರ್, ಭಗವಾನ್, ಜಗದೀಶ್, ಮಳಲಿ ನಾಗೇಶ್, ಸುಮಾ ಸುದೀಪ್, ಲಾವಣ್ಯ ಮಹೇಶ್, ಕೆ.ಜಿ. ದಿನೇಶ್, ಎಸ್. ಮಹೇಶ್, ನಿವೃತ್ತ ಸೈನಿಕ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೇರಿ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಸಭೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಎಸ್‌ಪಿ ಸೇರಿದಂತೆ ಇತರ ಪಕ್ಷಗಳ 80ಕ್ಕೂ ಅಧಿಕ ಕಾರ್ಯಕರ್ತರು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಕೆರೆಕೇರಿಯ ಅರೆಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಭೆಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರಾದ ವಿಎಸ್‌ಎಸ್‌ಎನ್ ನಿರ್ದೇಶಕ ಸುಬ್ರಹ್ಮಣ್ಯ ಆಚಾರ್, ಗ್ರಾ.ಪಂ. ಮಾಜೀ ಅಧ್ಯಕ್ಷೆ ರೋಹಿಣಿ ಆಚಾರ್, ಅಪ್ಸರ್, ಶಾನು, ಜಗದೀಶ್, ದೇವರಾಜ್, ಜವರಯ್ಯ, ವಸಂತ್, ನಿವೃತ್ತ ಶಿಕ್ಷಕ ಯೋಗಪ್ಪ ಸೇರಿದಂತೆ 80ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*