ಮಡಿಕೇರಿ ಜ.15 : ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ “ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನಾ ವಿಭಾಗದ ವತಿಯಿಂದ ಮೊದಲ ಬಾರಿಗೆ ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಮಕ್ಕಳ “ಕಲಿಕಾ ಹಬ್ಬ’ ಎಂಬ ಚೇತೋಹಾರಿ ಕಾರ್ಯಕ್ರಮ ಎರಡು ದಿನಗಳ ಕಾಲ ಉತ್ತರ ಕೊಡಗಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಕಲಿಕಾ ಹಬ್ಬದಲ್ಲಿ 11 ಸರ್ಕಾರಿ ಶಾಲೆಯ 120 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಗುವಿಗೆ ಕಲಿಕೆಯೇ ಒಂದು ಹಬ್ಬವಾಗಿದೆ, ಇಲ್ಲಿ ಮಗುವಿನ ಪ್ರಶ್ನೆಯೇ ಪ್ರಜ್ಞೆಯಾಗಲಿದೆ, ಏಕೆಂದರೆ “ಪ್ರಶ್ನೆಯು ಪ್ರಜ್ಞೆ ಯಾಗಲಿ’ ಎಂಬುವುದು “ಕಲಿಕಾ ಹಬ್ಬ’ದ ಮೂಲ ಆಶಯವಾಗಿದೆ ಎಂದರು.
ಸಿ ಆರ್ ಪಿ ಕೆ.ಶಾಂತಕುಮಾರ್ ಮಾತನಾಡಿ, ಇದೇ ಮೊದಲ ಬಾರಿಗೆ ಆರಂಭಗೊAಡ ಕಲಿಕಾ ಹಬ್ಬದಲ್ಲಿ ಮಕ್ಕಳು ಸಂಭ್ರಮದಿoದ ಕಲಿಕೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಸಂತಸದ ವಿಚಾರ. ಮಕ್ಕಳು ಸ್ವಯಂ ಪ್ರೇರಿತರಾಗಿ ತಮ್ಮನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಹಬ್ಬವೆಂದಾಗ ಅಲ್ಲಿ ಮಕ್ಕಳ ತನ್ಮಯವಾದ ಪಾಲ್ಗೊಳ್ಳುವಿಕೆ ಇರುತ್ತದೆ ಎಂದರು.
ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಎ.ಯೋಗೇಶ್ ಮಾತನಾಡಿ, ಮಗುವಿನಲ್ಲಿ ಯಾವುದೇ ಕಲಿಕೆ ಆಗಬೇಕಿದ್ದರೂ ಅದು ಮಗುವಿಗೆ ಅನುಭವದ ಮೂಲಕ ಆಗಬೇಕು. ಕಲಿಕಾ ಹಬ್ಬದಲ್ಲಿ ಸರ್ಕಾರಿ ಶಾಲಾ ಮಕ್ಕಳ ಪ್ರತಿಭೆಯು ಅನನ್ಯವಾದುದು ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿ ಎಂ.ಎನ್.ಕಾಳಪ್ಪ ಮಾತನಾಡಿ, ಕಲಿಕಾ ಹಬ್ಬದಲ್ಲಿ ಸರ್ಕಾರಿ ಶಾಲಾ ಮಕ್ಕಳು ಪ್ರತಿಭೆಯನ್ನು ಶ್ಲಾಘಿಸಿದರು.
ಸಂಪನ್ಮೂಲ ಶಿಕ್ಷಕರಾದ ಎಸ್.ಎಂ.ಗೀತಾ, ಕೆ.ಕೆ.ಗಾಯತ್ರಿ, ಕಲಿಕಾ ಹಬ್ಬದಲ್ಲಿ ಮಕ್ಕಳು ಪ್ರದರ್ಶಿಸಿದ ಚಟುವಟಿಕೆಗಳ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನAದ ಪ್ರಕಾಶ್, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಡಿ.ರಮ್ಯ, ಅನ್ಸಿಲಾ ರೇಖಾ ಇತರರು ಇದ್ದರು.
ಸಂಪನ್ಮೂಲ ಶಿಕ್ಷಕರಾದ ಎಸ್.ಎಂ.ಗೀತಾ,ರಜನಿ, ಕೆ.ಕೆ.ಗಾಯತ್ರಿ, ಮಂಗಳಗೌರಿ, ಸೋಮಶೇಖರ್ ಅವರು “ಮಾಡು-ಆಡು’, “ಊರು ತಿಳಿಯೋಣ’, “ಕಾಗದ-ಕತ್ತರಿ’, “ಆಡು-ಹಾಡು’ ಎಂಬ ನಾಲ್ಕು ಗುಂಪುಗಳಲ್ಲಿ ಅನೇಕ ನಾವೀನ್ಯಪೂರ್ಣವಾದ ವಿಚಾರಗಳನ್ನು ವಿವಿಧ ಚಟುವಟಿಕೆಗಳ ಮೂಲಕ ತಿಳಿಸಿದರು.
ಕಲಿಕಾ ಹಬ್ಬದ ಆಶಯವನ್ನು ಮಕ್ಕಳಿಗೆ ತಲುಪಿಸುವುದಕ್ಕಾಗಿ ಕಾರ್ಯತತ್ಪರರಾದ ಕ್ರಿಯಾಶೀಲ ಸಂಪನ್ಮೂಲ ಶಿಕ್ಷಕರು ನಾಲ್ಕು ಮೂಲೆಗಳಲ್ಲಿ ಪ್ರತ್ಯೇಕವಾಗಿ ನಡೆದ ಕಲಿಕಾ ತರಬೇತಿಯಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಿಗೆ ತರಬೇತಿ ನೀಡಿದರು.
ಕೂಡಿಗೆ ಕ್ಲಸ್ಟರ್ ಮಟ್ಟದ 11 ಸರಕಾರಿ ಶಾಲೆಯ 4 ರಿಂದ 9ನೇ ತರಗತಿಯ ಮಕ್ಕಳು ಈ ಹಬ್ಬದ ಸಂಭ್ರಮದಲ್ಲಿ ತಮ್ಮನ್ನು ತಾವು ಮೈಮರೆತು ನಲಿಯುತ್ತಾ ಕಲಿತರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*