ಮಡಿಕೇರಿ ಜ.15 : ಕುಶಾಲನಗರ ಸರ್ಕಾರಿ ಎಂಜಿನಿಯರಿoಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಎನ್.ಎಸ್.ಸತೀಶ್ ಅವರು ಪ್ರಬಾರ ಪ್ರಾಂಶುಪಾಲ ಡಾ.ಸೀನಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.
ನಂತರ ಮಾತನಾಡಿದ ನೂತನ ಪ್ರಾಂಶುಪಾಲರು ಸರ್ಕಾರದ ನೆರವಿನೊಂದಿಗೆ ಕಾಲೇಜಿನ ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದರು.
ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಪರಶಿವಮೂರ್ತಿ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
ಡಾ.ಸತೀಶ್ ಅವರು ಈ ಹಿಂದೆ ಇದೇ ಕಾಲೇಜಿನ ಪ್ರಾಂಶುಪಾಲರಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂದರ್ಭ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ನಂತರ 2014 ರಲ್ಲಿ ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿoಗ್ ಕಾಲೇಜಿಗೆ ವರ್ಗವಾಗಿದ್ದರು.















