ಮಡಿಕೇರಿ ಜ.15 : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ 3 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿರುವ ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಸಂಘಟಿಸುವ ದಿಸೆಯಿಂದ ನಗರದ ಸೋಮೇಶ್ವರ ದೇವಾಲಯದ ಬಳಿಯ ಚಂದ್ರಶೀ ವಾಣಿಜ್ಯ ಸಂಕೀರ್ಣದಲ್ಲಿ ತೆರೆದ ಸಾಹಿತ್ಯ ಸಮ್ಮೇಳನ ಕಛೇರಿಯನ್ನು ಕುಶಾಲನಗರ ತಾಲ್ಲೂಕಿನ ತಹಸೀಲ್ದಾರ್ ಟಿ.ಎಂ.ಪ್ರಕಾಶ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಹೊಸ ತಾಲ್ಲೂಕಿನಲ್ಲಿ ನಡೆಯುತ್ತಿರುವ ಪ್ರಥಮ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಹಾಗು ಅರ್ಥವತ್ತಾಗಿ ನಡೆಯುವ ಸಂಬoಧ ತಾಲ್ಲೂಕು ಆಡಳಿತ ದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ಹಾಗೆಯೇ ಸಾಹಿತ್ಯ ಪರಿಷತ್ತು ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸಿ ಕೊಡುವುದಾಗಿ ತಹಸೀಲ್ದಾರ್ ಪ್ರಕಾಶ್ ಘೋಷಿಸಿದರು.
ಮುಖ್ಯ ಅತಿಥಿಗಳಾಗಿದ್ದ ಪೋಲೀಸ್ ಉಪ ಅಧೀಕ್ಷಕ ಆರ್.ವಿ.ಗಂಗಾಧರ್ ಮಾತನಾಡಿ, ಸಾಹಿತ್ಯ ಪರಿಷತ್ತು ಹಾಗು ವರ್ಷಕ್ಕೊಮ್ಮೆ ಜರುಗುವ ಸಾಹಿತ್ಯ ಸಮ್ಮೇಳನಗಳು ಕನ್ನಡಿಗರ ಅಸ್ಮಿತೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಮನಸುಗಳು ಸಮ್ಮೇಳನಕ್ಕೆ ಆಗಮಿಸಬೇಕು. ಹಾಗೆಯೇ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ಸಾಹಿತ್ಯ ಪರಿಷತ್ತಿನ
ಜಿಲ್ಲಾ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ, ಕುಶಾಲನಗರದಲ್ಲಿ ಜರುಗುತ್ತಿರುವ ಸಮ್ಮೇಳನವನ್ನು ತಾಲ್ಲೂಕಿನ ಮಹಾ ಜನತೆ ಮನೆ ಮನೆಯ ಹಬ್ಬದೋಪಾದಿಯಲ್ಲಿ ಸಂಭ್ರಮಿಸಬೇಕು ಎಂದರು.
ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಕಸಾಪ ನಿರ್ದೇಶಕ ಎಂ.ಇ.ಮೊಹಿದ್ದೀನ್, ಟಿ.ಜಿ.ಪ್ರೇಮಕುಮಾರ್, ಮೆ.ನಾ.ವೆಂಕಟನಾಯಕ್, ಫ್ಯಾನ್ಸಿ ಮುತ್ತಣ್ಣ, ವಿ.ಟಿ.ಮಂಜುನಾಥ್, ದೇವರಾಜು, ತಾಲ್ಲೂಕು ಸಮಿತಿ ಕಾರ್ಯದರ್ಶಿ ಎಸ್.ನಾಗರಾಜು, ಕೋಶಾಧಿಕಾರಿ ಕೆ.ವಿ.ಉಮೇಶ್, ಪ್ರೊ.ಹೆಚ್.ಬಿ.ಲಿಂಗಮೂರ್ತಿ, ಸಮ್ನೇಳನದ ವಿವಿಧ ಸಮಿತಿಗಳ ಪದಾಧಿಕಾರಿಗಳಾದ ವೆಂಕಟೇಶ ಪೂಜಾರಿ, ಎಂ.ಕೃಷ್ಣ, ಎಂ.ಡಿ.ರoಗಸ್ವಾಮಿ, ಎಂ.ಎನ್.ಚoದ್ರಮೋಹನ್, ಬಿ.ಎ.ನಾಗೇಗೌಡ, ಹೆಚ್.ಎಂ.ರಘು ಮೊದಲಾದವರಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*