ವಿರಾಜಪೇಟೆ ಜ.15 : ಕಾಫಿ ತೋಟದ ಲೈನ್ ಮನೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ಶ್ರೀಮಂಗಲದ ಕಾಫಿ ತೋಟವೊಂದರಲ್ಲಿ ಕಾಫಿ ಕೊಯ್ಯುವ ಕೆಲಸಕ್ಕಾಗಿ ಕಾರ್ಮಿಕರೊಬ್ಬರು ನೇಮಕಗೊಂಡಿದ್ದರು. ಇಂದು ಲೈನ್‌ಮನೆಯಲ್ಲಿ ಇವರ ಮೃತದೇಹ ಪತ್ತೆಯಾಗಿತ್ತು. ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವದ ವಾರಸುದಾರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.
ಮೃತದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.















