ಸೋಮವಾರಪೇಟೆ ಜ.15 : ಯುವಕನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.
ಗರ್ವಾಲೆ ಗ್ರಾಮದ ನಾಪಂಡ ಕುಶಾಲಪ್ಪ ಎಂಬುವವರ ಪುತ್ರ ರಾಜೇಶ್ ಚಂಗಪ್ಪ(28) ಮೃತ ವ್ಯಕ್ತಿ. ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಭಾನುವಾರ ಕುಟುಂಬದವರು ಸೋಮವಾರಪೇಟೆ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಂಜೆ ಮೃತದೇಹ ಪತ್ತೆಯಾಗಿದ್ದು, ಪೊಲಿಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಇನ್ಸ್ ಪೆಕ್ಟರ್ ರಾಮಚಂದ್ರನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.













