ಮಡಿಕೇರಿ ಜ.16 : ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಆರತಿ(24) ಮೃತ ಯುವತಿ. ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯೊಬ್ಬರ ಹೆಲ್ಮೆಟ್ ಮತ್ತು ಅನತಿ ದೂರದಲ್ಲಿ ಬೈಕ್ ಕೂಡ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆ ಕಾರ್ಯವನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
















