ಮಡಿಕೇರಿ ಜ.16 : ಮೂರ್ನಾಡು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮೂರ್ನಾಡುವಿನ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಬಿ.ಎ.ಜೀವಿಜಯ ಮಾತನಾಡಿ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ಕ್ಷೇತ್ರದ ಮತ್ತೊಬ್ಬ ಆಕಾಂಕ್ಷಿ ಯುವ ಮುಖಂಡ ಡಾ.ಮಂಥರ್ ಗೌಡ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿ ಯನ್ನು ಮಾಡದೆ ಬಿಜೆಪಿ ಕಡೆಗಣಿಸಿದೆ. ಅಭಿವೃದ್ಧಿ ದೃಷ್ಟಿಯಿಂದ ಈ ಬಾರಿ ಮತದಾರರು ಬದಲಾವಣೆ ತರಲಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಮತ್ತೋರ್ವ ಆಕಾಂಕ್ಷಿ ಸಮಾಜ ಸೇವಕ ಹರಪನಹಳ್ಳಿ ರವೀಂದ್ರ ಮಾತನಾಡಿ, ಕೊಡಗು ಜಿಲ್ಲೆ ಪಕೃತಿದತ್ತ ಸಂಪನ್ಮೂಲಗಳನ್ನು ಹೊಂದಿದ್ದು, ಅವನ್ನು ವ್ಯವಸ್ಥಿತ ಹಾಗೂ ಪರಿಣಾಮಕಾರಿಯಾಗಿ ಬಳಕೆ ಮಾಡಲು ಯೋಜನೆ ರೂಪಿಸುವಲ್ಲಿ ಈಗಿನ ಜನಪ್ರತಿನಿಧಿಗಳು ವಿಫಲರಾಗಿದ್ದು, ಈ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಬದಲಾವಣೆ ತರಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಬೂತ್ ಮಟ್ಟದ ಸಮಿತಿಯವರು ಮನೆಮನೆಗೆ ತೆರಳಿ ಈಗಿನಿಂದಲೇ ಜನರ ಮನವೊಲಿಸಿ ಚುನಾವಣೆಗೆ ಸಿದ್ದತೆ ನಡೆಸಲು ಸೂಚಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎ.ಹಂಸ ಮಾತನಾಡಿ, ಮೂರ್ನಾಡುವಿನಲ್ಲಿ ಪಕ್ಷ ಸಂಘಟನೆ ಬಲವಾಗಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳಿಕೆಯಾಗುವ ವಿಶ್ವಾಸ ವ್ಯಕ್ತ ಪಡಿಸಿದರು.
ಇದೇ ಸಂದರ್ಭದಲ್ಲಿ ಎಸ್.ಸಿ.ಘಟಕ ಜಿಲ್ಲಾಧ್ಯಕ್ಷ ಜಯೇಂದ್ರ ನೇತೃತ್ವದಲ್ಲಿ ಬ್ಲಾಕ್ ಎಸ್.ಸಿ.ಘಟಕದ ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಸ್ ,ಡಿಸಿಸಿ ಪ್ರಮುಖರಾದ ಪಾಪು ಸಣ್ಣಯ್ಯ, ಮಂದ್ರಿರ ಮೋಹನ್ ದಾಸ್,ಬ್ಲಾಕ್ ಪ್ರಮುಖರಾದ ಯಶ್ ದೋಲ್ಪಾಡಿ,ರವಿಗೌಡ,ಶಾಫಿ ಕೊಟ್ಟಮುಡಿ,ಮೂರ್ನಾಡು ವಲಯ ಕಾಂಗ್ರೆಸ್ ಅಧ್ಯಕ್ಷ ಕೇಶವ ,ಪ್ರಮುಖರಾದ ಶಿವ ಕುಮಾರ್, ಧನಂಜಯ , ಮಹಮದ್ ಆಲಿ, ರಘು ಭೈರ,ಮೀನಾಕ್ಷಿ ಕೇಶವ, ಲಿಲ್ಲಿ ಗೌಡ, ಸಾದಿಕ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.