ಮಡಿಕೇರಿ ಜ.16 : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ನಾವೀನ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವೈದ್ಯ ಅಮೃತ್ ನಾಣಯ್ಯ ಹೇಳಿದರು. ಜೆಸಿ ವಿದ್ಯಾ ಸಂಸ್ಥೆಯ 33ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೋಷಕರಿಗೂ, ಶಿಕ್ಷಕರಿಗೂ ತಮ್ಮ ಅನುಭವದ ಮೂಲಕ ಜ್ಞಾನದ ಬೆಳಕನ್ನು ಚೆಲ್ಲಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೈಲಬೆಳಗಿ ಮಾತನಾಡಿ, ಸಮಯದ ಮಹತ್ವವನ್ನು ಅರಿತು ಶ್ರದ್ಧೆಯನ್ನು ಹೆಚ್ಚಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೋಟ್ರಂಗಡ ಸುಬ್ರಮಣಿ, (ಕರೆಸ್ಪಾಂಡೆಂಟ್ ) ವರದಿಗಾರ ಮಚ್ಚಮಾಡ ಸುರೇಶ್, ಆಡಳಿತಾಧಿಕಾರಿ ಕೋಟ್ರಂಗಡ ತಿಮ್ಮಯ್ಯ , ಟ್ರಸ್ಟಿಗಳಾದ ಕೋಟ್ರಂಗಡ ಯಶೋಧ, ಕೋಟ್ರಂಗಡ ಸುನಿಲ್ ಸುಬ್ಬಯ್ಯ, ಮಚ್ಚಮಾಡ ಅಪ್ಪಣ್ಣ , ಮುಖ್ಯಶಿಕ್ಷಕ ಎನ್. ಬಿ. ಸತೀಶ್ ಹಾಗೂ ಕೆ.ಕೆ. ಸಿಂಧೂರ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಜನರ ಮನಸೂರೆಗೊಂಡಿತು. ಕೋಟ್ರಂಗಡ ತಿಮ್ಮಯ್ಯ ಸರ್ವರಿಗೂ ಸ್ವಾಗತ ಕೋರಿದರು. ಮಕ್ಕಳ ಕಾರ್ಯಕ್ರಮಕ್ಕೆ ಜನರಿಂದ ಪ್ರಶಂಸೆಗಳ ಸುರಿಮಳೆಯೇ ಸುರಿಯಿತು. ಶಿಕ್ಷಕ ವೃಂದದವರು ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕ ಪ್ರಸನ್ನ ಹಾಗೂ ಚಂಚಲ ಕಾರ್ಯಕ್ರಮದ ನಿರೂಪಣೆ ಮಾಡಿದರು. ಸಹಶಿಕ್ಷಕ ಬಿಂದುಸಾರ ವಂದನಾರ್ಪಣೆ ಮಾಡಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*