ಮಡಿಕೇರಿ ಜ.16 : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪಕ್ಷದ ಹಿರಿಯ ಮುಖಂಡ ಟಿ.ಪಿ.ರಮೇಶ್ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶಿಫಾರಸ್ಸಿನೊಂದಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಲ್ ಅವರು ಬಿಡುಗಡೆಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ರಾಜ್ಯ, ವಿಭಾಗ ಹಾಗೂ ಜಿಲ್ಲಾ ಪದಾಧಿಕಾರಿಗಳ ಪಟ್ಟಿಯಲ್ಲಿ ಟಿ.ಪಿ.ರಮೇಶ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಟಿ.ಪಿ.ರಮೇಶ್ ಅವರು ಕಳೆದ 15 ವರ್ಷಗಳಿಂದ ಕೆಪಿಸಿಸಿ ಸದಸ್ಯರಾಗಿ, ಎರಡು ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಪ್ಯಾನಲಿಸ್ಟ್ ಆಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್‍ನ ಸಂಯೋಜಕರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಸೇವೆ ಸಲ್ಲಿಸಿದ್ದಾರೆ.















