ಮಡಿಕೇರಿ ಜ.17 : ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯದರ್ಶಿ ಹಾಗೂ ವಕೀಲ ಎಂ.ಸಿ.ವಾಸುದೇವ್ (80) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಮೃತರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬೆಂಗಳೂರಿನ ಪುತ್ರಿಯ ಮನೆಯಲ್ಲೇ ವಾಸುದೇವ್ ಅವರು ನಿಧನ ಹೊಂದಿದರು. ಪುರಸಭೆಯ ಅಧ್ಯಕ್ಷರಾಗಿದ್ದಾಗ ಅವರು ಉತ್ತಮ ಆಡಳಿತ ನೀಡಿದ್ದರು.
::: ಸಂತಾಪ :::
ಹಿರಿಯ ಕಾಂಗ್ರೆಸ್ಸಿಗ ಎಂ.ಸಿ.ವಾಸುದೇವ್ ಅವರ ನಿಧನಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ, ಯುವ ಮುಖಂಡ ಡಾ.ಮಂತರ್ ಗೌಡ, ಮಾಜಿ ಸಚಿವ ಬಿ.ಎ.ಜೀವಿಜಯ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಪ್ರಮುಖರಾದ ಕೆ.ಎ.ಯಾಕುಬ್, ಕೆ.ಯು.ಅಬ್ದುಲ್ ರಜಾಕ್, ಅಯ್ಯಪ್ಪ ಸೇರಿದಂತೆ ಎಲ್ಲಾ ಬ್ಲಾಕ್ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.















