ಮಡಿಕೇರಿ ಜ.17 : ಚೆಟ್ಟಳ್ಳಿ ಪ್ರೌಢಶಾಲೆಯ ಸಮೀಪದಲ್ಲಿರುವ ಶ್ರೀಗಣಪತಿ ದೇವಾಲಯಕ್ಕೆ ಕಳ್ಳರು ನುಗ್ಗಿದ್ದು, ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.
ಇಂದು ಬೆಳಗ್ಗೆ ದೇವಾಲಯ ಸಮಿತಿಯ ಅಧ್ಯಕ್ಷ ಮುಳ್ಳಂಡ ರತ್ತುಚಂಗಪ್ಪ ಅವರು ಪೂಜೆ ಸಲ್ಲಿಸಲು ಆಗಮಿಸಿದಾಗ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ.
ಚೆಟ್ಟಳ್ಳಿ ಪೊಲೀಸ್ ಉಪಠಾಣೆಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಕಳ್ಳರು ಹುಂಡಿಯ ಬೀಗವನ್ನು ಮುರಿದು ಸುಮಾರು 5 ಸಾವಿರ ರೂ.ಗಳಷ್ಟು ಹಣವನ್ನು ದೋಚಿರುವುದು ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*