ಮಡಿಕೇರಿ ಜ.17 : ಸಿಮೆಂಟ್ ತುಂಬಿದ ಲಾರಿಯೊಂದು ಮಗುಚಿಕೊಂಡ ಘಟನೆ ಗೋಣಿಕೊಪ್ಪ ವಿರಾಜಪೇಟೆ ಮುಖ್ಯ ರಸ್ತೆಯ ಹಾತೂರು ಗ್ರಾಮದ ತಿರುವಿನಲ್ಲಿ ನಡೆದಿದೆ.
ಸೋಮವಾರ ರಾತ್ರಿ ಸುಮಾರು 11.45 ಗಂಟೆಗೆ ಈ ಘಟನೆ ನಡೆದಿದ್ದು, ವಿಷಯ ತಿಳಿದ ಸ್ಥಳೀಯ ನಿವಾಸಿ ಕೊಕ್ಕಂಡ ರೂಪ ಭೀಮಯ್ಯ ಹಾಗೂ ಪುತ್ರ ಬಿದ್ದಪ್ಪ ಅವರುಗಳು ಸ್ಥಳಕ್ಕೆ ಆಗಮಿಸಿ ಚಾಲಕ ಹಾಗೂ ನಿರ್ವಾಹಕನನ್ನು ಲಾರಿಯಿಂದ ಹೊರ ತರುವಲ್ಲಿ ಯಶಸ್ವಿಯಾದರು. ನಂತರ ಪೊಲೀಸ್ ಹಾಗೂ ಆಂಬ್ಯುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಇದೀಗ ಇಬ್ಬರು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.















