ಕುಶಾಲನಗರ ಜ.16 : ಕೂಡುಮಂಗಳೂರು ಗ್ರಾ.ಪಂ ಎರಡನೇ ವಾರ್ಡ್ ನ ಬಸವೇಶ್ವರ ಬಡಾವಣೆಯಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧಿನ್ ಪರಿಶೀಲನೆ ನಡೆಸಿದರು.
ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಸಾರ್ವಜನಿಕ ಕಾರ್ಯ ಇಲಾಖೆ ವತಿಯಿಂದ ಅಂದಾಜು 9.8 ಲಕ್ಷ ರೂ.ಗಳ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.









