ಮಡಿಕೇರಿ ಜ.18 : 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಭೇತಿ ಕೇಂದ್ರದ ಮೂಲಕ ಜೆಇಇ(ಅಡ್ವಾನ್ಸ್ ಅಂಡ್ ಮೈನ್ಸ್) ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜನವರಿ, 31 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸ್ಶೆಟ್ www.sw.kar.nic.in ನಲ್ಲಿ ನೋಡಬಹುದು.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ರಾಜ್ಯದ ಅನುಸೂಚಿತ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿರತಕ್ಕದ್ದು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 300 ಕ್ಕಿಂತ ಹೆಚ್ಚು ಅಂಕ ಪಡೆದಿರತಕ್ಕದ್ದು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ.5 ಲಕ್ಷಗಳ ಮಿತಿಯಲ್ಲಿರತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರತಕ್ಕದ್ದು. ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ, ನಿಗಧಿತ ಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಪಡೆದಿರಬೇಕು.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.









