ಸೋಮವಾರಪೇಟೆ,ಜ.18 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ಪ್ರಶಿಕ್ಷಣ ವರ್ಗಕ್ಕೆ ಚಾಲನೆ ದೊರೆಯಿತು.
ಸೋಮವಾರಪೇಟೆ ಪಟ್ಟಣ ಸಮೀಪದ ಜಾನಕಿ ಕನ್ವೆನ್ಷನ್ ಸಭಾಂಗಣದಲ್ಲಿ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ, ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಮಹಿಳಾ ಮೋರ್ಚಾ ಹೆಚ್ಚಿನ ಒತ್ತು ನೀಡಬೇಕು. ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಬೇಕು. ಪಕ್ಷದ ಅಸ್ತಿತ್ವದ ಮಾನದಂಡ ಚುನಾವಣೆಯಾಗಿದೆ. ಇದರ ಫಲಿತಾಂಶದ ಮೇಲೆ ಪಕ್ಷದ ಬಲ ಪ್ರದರ್ಶನಗೊಳ್ಳಲಿದೆ. ಈ ಹಿನ್ನೆಲೆ ಮಹಿಳಾ ಮೋರ್ಚಾವು ಸಂಘಟನೆಗೆ ಇನ್ನಷ್ಟು ಒತ್ತು ನೀಡಬೇಕು ಎಂದರು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಹಿರಿಯರ ಪರಿಶ್ರಮದಿಂದ ಇಂದು ಭಾರತೀಯ ಜನತಾ ಪಾರ್ಟಿ ಸ್ಥಳೀಯ ಸಂಸ್ಥೆಗಳಿಂದ ಹಿಡಿದು ರಾಜ್ಯ ರಾಷ್ಟ್ರದಲ್ಲಿ ಅಧಿಕಾರದಲ್ಲಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಅಭಿವೃದ್ಧಿಗೆ ಹೊಸ ಆಯಾಮ ಬಂದಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶರಿನ್ ಸುಬ್ಬಯ್ಯ, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ವಿಜಯಲಕ್ಷ್ಮೀ ಸುರೇಶ್, ಮಹಿಳಾ ಮೋರ್ಚಾ ಜಿಲ್ಲಾ ಉಸ್ತುವಾರಿ ಭಾಗೀರಥಿ ಉಪಸ್ಥಿತರಿದ್ದರು.