ಸಿದ್ದಾಪುರ ಜ.18 : ಕೊಡಗು ಕಾವೇರಿ ತಮಿಳು ಸಂಘದ ವತಿಯಿಂದ 7ನೇ ವರ್ಷದ ಪೊಂಗಲ್ ಹಬ್ಬವನ್ನು ಸಿದ್ದಾಪುರದ ಸೆಂಟೇನರಿ ಹಾಲ್ ಸಭಾಂಗಣದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲೆಯ ಸುತ್ತಮುತ್ತಲಿನಿಂದ ಆಗಮಿಸಿದ ತಮಿಳು ಬಾಂಧವರು ಒಗ್ಗೂಡಿ ಸಂಪ್ರದಾಯ ಆಚರಣೆಯೊಂದಿಗೆ ವಿಶೇಷ ಪೂಜಾ ಕಾರ್ಯಕ್ಕೆ ಸಂಘದ ಅಧ್ಯಕ್ಷ ತಿರುಮಲ ರಾಜ ಚಾಲನೆ ನೀಡಿದರು.
ಹೊರಾಂಗಣದಲ್ಲಿ ವಿಶೇಷ ಪೊಂಗಲ್ ಖಾದ್ಯವನ್ನು ತಯಾರಿಸಿ ತಿನ್ನುವುದರೊಂದಿಗೆ ಪರಸ್ಪರ ಶುಭಾಶಯ ಹಂಚಿಕೊಂಡರು.
ಕಾರ್ಯಕ್ರಮ ಉದ್ಘಾಟನೆ : ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಹಬ್ಬ ಆಚರಣೆಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ. ಆಚಾರ, ವಿಚಾರ, ಸಂಸ್ಕೃತಿ ಪರಂಪರೆಯನ್ನು ಉಳಿಸುವುದರೊಂದಿಗೆ ಸರ್ಕಾರದ ಸೌಲತ್ತುಗಳನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದರು.
ಮಕ್ಕಳನ್ನು ಶಾಲೆಗಳಿಗೆ ಕಳಿಸಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದ್ದು, ತಮಿಳು ಜನಾಂಗದವರಿಗಾಗಿಯೇ ಜಿಲ್ಲೆಯಲ್ಲಿ ಐದು ತಮಿಳು ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಮನವಿ ಮಾಡಿದರು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಶಾಲಾ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೂ ಸರ್ಕಾರದಿಂದ ವಿದ್ಯಾರ್ಥಿ ವೇತನ ಸಿಗಲಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ ಇಂದಿನಿಂದಲೂ ತಮಿಳು ಬಾಂಧವರು ನೆಲೆಯೂರಿದ್ದು, ಸಂಘಟನೆಯ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಅಭಿವೃದ್ಧಿಯೊಂದಿಗೆ ಮುಂದೆ ಬರಬೇಕೆಂದು ಹೇಳಿದ ಅವರು ತಮಿಳು ಸಂಘದ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜಿ.ಪಂ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ತಮಿಳು ಬಾಂಧವರು ಅನ್ಯೂನತೆಯಿಂದ ತಮ್ಮದೇ ಆದ ಜೀವನ ನಡೆಸುತ್ತಿದ್ದಾರೆ. ಸಂಘಟನೆಯ ಮೂಲಕ ಹಬ್ಬ ಆಚರಣೆಯೊಂದಿಗೆ ಬಾಂಧವರೆಲ್ಲರೂ ಒಗ್ಗೂಡಿ ಸಂಭ್ರಮಿಸುತ್ತಿರುವುದು ಮಾದರಿಯಾಗಿದೆ. ಹಲವು ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೇವಾ ಮನೋಭಾವದೊಂದಿಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿರುವ ತಮಿಳು ಸಂಘದ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ, ದೇಶದ ಇತಿಹಾಸದಲ್ಲಿ ತಮಿಳು ಬಾಂಧವರ ಕೊಡುಗೆ ಅಪಾರವಾಗಿದ್ದು, ಹಲವಾರು ಸಾಧನೆಗಳ ಮೂಲಕ ಗುರುತಿಸಿಕೊಂಡಿದ್ದಾರೆ. ತಮಿಳುನಾಡು ಮೂಲದವರೇ ಆದ ಎಪಿಜೆಅಬ್ದುಲ್ ಕಲಾಂ ಅವರು ರಾಷ್ಟ್ರಪತಿಯಾಗಿ ಗಣನೀಯ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ನಾಯಕನಿಗಾಗಿ ತ್ಯಾಗ ಮಾಡಲು ಸಿದ್ಧವಿರುವ ತಮಿಳು ಬಾಂಧವರು ನಂಬಿದವರನ್ನು ಕೈ ಬಿಡುವುದಿಲ್ಲ. ಎಲ್ಲ ರಂಗಗಳಲ್ಲೂ ಗುರುತಿಸಿಕೊಂಡು ಸಾಧನೆ ಮಾಡಿದವರಲ್ಲಿ ಹಲವಾರು ಗಣ್ಯರಿದ್ದು ಇವರ ಸೇವೆಯ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಇದೇ ಸಂದರ್ಭ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಪಾಲಿಬೆಟ್ಟ ತಮಿಳು ಶಾಲೆಯ ಶಿಕ್ಷಕಿ ಮಲ್ಲಿಗೇಶ್ವರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಕಾವೇರಿ ತಮಿಳು ಸಂಘದ ಜಿಲ್ಲಾಧ್ಯಕ್ಷ ತಿರುಮಲ ರಾಜ, ಉಪಾಧ್ಯಕ್ಷರುಗಳಾದ ಧರ್ಮರಾಜ್, ನಾಗರಾಜ್, ಗಣೇಶ್, ಕಾರ್ಯದರ್ಶಿ ಫ್ರಾನ್ಸಿಸ್, ಗೌರವ ಸಲಹೆಗಾರರಾದ ಮೈಕಲ್, ಕುಮಾರ್ ಮೇಸ್ತ್ರಿ, ಸೇದುರಾಮನ್, ಮುರಗೇಶ್, ಖಜಾಂಚಿ ಮುತ್ತುವೆಲ್‍ತಂಬಿ, ಶೇಖರ್, ಸಲಹೆಗಾರರಾದ ಕಣ್ಣನ್, ಶಬರಿ, ಕುಮಾರ್, ಮಣಿ, ರವಿ, ವೇಲು, ಕಾವೇರಿ, ಸರವಣ, ದಿನೇಶ್, ಸುರೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*