ಮಡಿಕೇರಿ ಜ.18 : ಜಿಲ್ಲಾ ವಲಯ ಕೈಮಗ್ಗ ಉದ್ದಿಮೆಗಳಿಗೆ ಸಹಾಯ ಯೋಜನೆಯಡಿ 2022-23 ನೇ ಸಾಲಿನಲ್ಲಿ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜ.30 ರಿಂದ ಫೆ .5 ರವರೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಜನವರಿ 30 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.















