ಮಡಿಕೇರಿ ಜ.18 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ನಲ್ಲೂರು ಮತ್ತು ಎಫ್2 ಬಾಳೆಲೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜನವರಿ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ಸ್ಥಗಿತಗೊಳ್ಳಲಿದೆ.
ಆದ್ದರಿಂದ ಕಿರುಗೂರು, ನಲ್ಲೂರು, ಪೊನ್ನಪ್ಪಸಂತೆ, ಸುಳುಗೋಡು, ಬಾಳೆಲೆ, ಮತ್ತೂರು, ಕಾನೂರು, ದೇವನೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಾಗೆಯೇ ಎಫ್6 ಹುದಿಕೇರಿ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜನವರಿ, 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ.
ಆದ್ದರಿಂದ ಬಲ್ಯಮಂಡೂರು, ಚಿಕ್ಕಮಂಡೂರು, ತಾವರೆಕೆರೆ, ಮುಗಟಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಅವರು ಕೋರಿದ್ದಾರೆ.









