ವಿರಾಜಪೇಟೆ ಜ.19 : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಓಜಸ್ವಿ ಫೌಂಡೇಶನ್ ಸಹಯೋಗದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕಾರ್ಯಾಗಾರ ನಡೆಸಲಾಯಿತು.
ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೈಸೂರಿನ ಅಂತಾರಾಷ್ಟ್ರೀಯ ಲೈಫ್ ಸ್ಕಿಲ್ ಕೋಚ್, ಚೇತನ್ ರಾಂ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ವಿಧ್ಯಾರ್ಥಿಗಳಿಗೆ ಪ್ರೇರಣಾ ಹಾಗೂ ಪರೀಕ್ಷೆಯ ಗೆಲುವಿನ ಸೂತ್ರಗಳನ್ನು, ಓದಿನ ಮಹತ್ವ, ಸಮಯ ನಿರ್ವಹಣೆ, ಏಕಾಗ್ರತೆ ಹಾಗೂ ಪರೀಕ್ಷೆಯನ್ನು ಎದುರಿಸಲು ಬೇಕಾದ ಎಲ್ಲಾ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ತಿಳಿಸಿ ಕೊಟ್ಟರು. ಪರೀಕ್ಷೆಯ ಭಯ, ಆತಂಕ ಬಿಟ್ಟು, ಪರೀಕ್ಷೆ ಒಂದು ಹಬ್ಬದಂತೆ ಸಂಭ್ರಮಿಸಿ ಎಂದು ವಿದ್ಯಾರ್ಥಿ ಗಳಿಗೆ ಉತ್ತೇಜನ ನೀಡಿದರು.
ವಿರಾಜಪೇಟೆ ತಾಲೂಕಿನ ಸುಮಾರು 800 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಓಜಸ್ವಿ ಫೌಂಡೇಶನ್ನಿನ ಸಂಸ್ಥಾಪಕಿ ಡಾ.ಕವಿತ ಪಿ.ಸಿ., ಕ್ಷೇತ್ರ ಸಂಪನ್ಮೂಲ ಅಧಿಕಾರಿ ವನಜಾಕ್ಷಿ, ಶಿಕ್ಷಣ ಇಲಾಖೆಯ ಗಾಯತ್ರಿ, ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಅಯ್ಯಪ್ಪ ಪಿ.ಆರ್, ಸಂತ ಅನ್ನಮ್ಮ ಶಾಲೆ ಮುಖ್ಯೋಪಾಧ್ಯಾಯ ಬೆನ್ನಿ ಜೋಸೆಫ್, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರು, ಹಾಗೂ ಇತರೆ ಅಧಿಕಾರಿಗಳು, ಓಜಸ್ವಿ ಫೌಂಡೇಶನ್ನಿನ ಸದಸ್ಯರಾದ ಬ್ರಿಜೇಶ್ ಸಿ.ಎ, ಶಾಲಾ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿ ವೃಂದ ಪಾಲ್ಗೊಂಡಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*