ಮಡಿಕೇರಿ ಜ.19 : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅನ್ವಯ ರಾಜ್ಯದ ಎಲ್ಲಾ ಆಹಾರ ವಸ್ತುಗಳ ತಯಾರಕರು, ರಿಲೇಬಲ್, ರಿಪ್ಯಾಕಿಂಗ್ ಆಮದುದಾರರು ಮತ್ತು ತಯಾರಕ-ರಪ್ತುದಾರರು ತಮ್ಮ ಘಟಕದ ಆಹಾರ ಪದಾರ್ಥ ವಹಿವಾಟಿನ 2020-21 ಮತ್ತು 2021-22 ಹಾಗೂ 2022-23 ನೇ ಸಾಲಿನ ವಾರ್ಷಿಕ ವರಮಾನ ವಿವರಗಳನ್ನು ಪ್ರತಿ ಆರ್ಥಿಕ ವರ್ಷದ ಮೇ-31 ರ ಕಾಲಮಿತಿಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅಧಿಕೃತ ಅಂರ್ತಜಾಲ https://foscos.fssai.gov.in ರಲ್ಲಿ ನಮೂದಿಸುವುದು ಕಡ್ಡಾಯವಾಗಿದೆ.
ಈ ಬಗ್ಗೆ ಈಗಾಗಲೇ ಅಧಿಕೃತ ಅಂರ್ತಜಾಲ ತಾಣದಲ್ಲಿಯೂ ಮಾಹಿತಿ ನೀಡಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ಆಹಾರ ಪರವಾನಗಿ ಪಡೆದಿರುವ ಎಲ್ಲಾ ಆಹಾರ ಪದಾರ್ಥ ತಯಾರಕರು ಮತ್ತು ಪ್ಯಾಕರ್ಸ್, ರಿಲೇಬಲ್‍ದಾರರು, ಆಮದುದಾರರು ಹಾಗೂ ತಯಾರಕ-ರಪ್ತುದಾರರು ತಮ್ಮ ವಾರ್ಷಿಕ ವರಮಾನ ವಿವರವನ್ನು ಮತ್ತು ತಾವು ತಯಾರಿಸುವ ಅಥವಾ ರಿಲೇಬಲ್, ರಿಪ್ಯಾಕಿಂಗ್ ಮಾಡುವ ಆಹಾರ ಪದಾರ್ಥಗಳನ್ನು ಪ್ರತಿ 06 ತಿಂಗಳಿಗೊಮ್ಮ ರಾಷ್ಟ್ರೀಯ ಪ್ರಯೋಗಾಲಯ ಮಾನ್ಯತಾ ಮಂಡಳಿಯಿಂದ (ಎನ್‍ಎಬಿಎಲ್) ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರಕ್ಕೆ ನೋಂದಾಯಿತ ಪ್ರಯೋಗಾಲಯದಲ್ಲಿ ವಿಶ್ಲೇಷಿಸಿ ವರದಿಯನ್ನು ಅಧಿಕೃತ ಅಂರ್ತಜಾಲತಾಣದಲ್ಲಿ ತಮ್ಮ ತಮ್ಮ ಲಾಗಿನ್‍ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ.
ಇಲ್ಲದಿದಲ್ಲಿ ದಿನಕ್ಕೆ ರೂ. 100 ರಷ್ಟು ದಂಡ ಪಾವತಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತಾಧಿಕಾರಿ ಅನಿಲ್ ಧವನ್ ಅವರು ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*