ಮಡಿಕೇರಿ ಜ.19 : ಸುಳ್ಯದ ಶ್ರೀ ವೆಂಕಟರಮಣ ಕ್ರ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯ ಎರಡು ನೂತನ ಶಾಖೆಗಳನ್ನು ನಾಪೋಕ್ಲು ಮತ್ತು ಸೋಮವಾರಪೇಟೆಯಲ್ಲಿ ಆರಂಭಿಸಲಾಗುತ್ತಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್‍ನಲ್ಲಿ 18ನೇ ಶಾಖೆಯ ಉದ್ಘಾಟನೆ ಜ.23 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಶಾಖೆಯ ಕಛೇರಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಭದ್ರತಾ ಕೊಠಡಿಯನ್ನು ಮಡಿಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ, ಗಣಕೀಕರಣ ವ್ಯವಸ್ಥೆಯನ್ನು ಸಹಕಾರ ಸಂಘಗಳ ಉಪನಿಬಂಧಕರಾದ ಕೃಷ್ಣಪ್ರಸಾದ್ ಎಂಎಸ್. ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲು ಪತ್ರವನ್ನು ನಾಪೋಕ್ಲು ಗ್ರಾಪಂ ಅಧ್ಯಕ್ಷರಾದ ಪಾರ್ವತಿ, ಪ್ರಥಮ ಠೇವಣಿ ಪತ್ರವನ್ನು ಮಡಿಕೇರಿ ಸರ್ವೋದಯ ಸಮಿತಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಂಬೆಕಲ್ಲು, ಪ್ರಥಮ ಉಳಿತಾಯ ಖಾತೆ ಪತ್ರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ತುಳಸಿ ಮೋಹನ್ ಕಡ್ಲೇರ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಎ.ಕೆ. ನವೀನ್ ಅಪ್ಪಯ್ಯ ಪಾಲ್ಗೊಳ್ಳಲಿದ್ದು, ಸಭಾಧ್ಯಕ್ಷತೆಯನ್ನು ತಾನೇ ವಹಿಸಲಿರುವುದಾಗಿ ಜಯರಾಮ ಅವರು ಮಾಹಿತಿಯನ್ನಿತ್ತರು.
ಸೊಸೈಟಿಯ 19ನೇ ಶಾಖೆ ಸೋಮವಾರಪೇಟೆಯ ನಿಶಾಂತ್ ಟವರ್ಸ್‍ನ ಒಂದನೇ ಮಹಡಿಯಲ್ಲಿ ಜ.27 ರಂದು ಉದ್ಘಾಟನೆಗೊಳ್ಳಲಿದೆ. ಶಾಖೆಯ ಕಛೇರಿಯನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಉದ್ಯಮಿ ಡಾ. ಮಂಥರ್ ಗೌಡ, ಗಣಕೀಕರಣ ವ್ಯವಸ್ಥೆಯನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಂ.ಎ.ಮೋಹನ್ ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲು ಪತ್ರವನ್ನು ಸೋಮವಾರಪೇಟೆ ಪಪಂ ಅಧ್ಯಕ್ಷ ಪಿ.ಕೆ. ಚಂದ್ರು, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರೋಹಿತ್ ಹೆಚ್., ಪ್ರಥಮ ಠೇವಣಿ ಪತ್ರವನ್ನು ಕಾಫಿ ಬೆಳೆಗಾರರಾದ ಸುವಿನಾ ಕೃಪಾಲ್ ವಿತರಿಸಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ಜಿ.ಎಸ್. ಮೋಹನ್ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ತಿಂಗಳ ಅವಧಿಗೆ ಶೇಕಡ ಅರ್ಧ ಹೆಚ್ಚಿನ ಬಡ್ಡಿ- ನೂತನ ಶಾಖೆಗಳ ಆರಂಭದಿಂದ ಒಂದು ತಿಂಗಳ ಅವಧಿಗೆ ಸೀಮಿತವಾಗಿ ಠೇವಣಿಯ ಮೇಲೆ ಶೇ.0.50 ಹೆಚ್ಚುವರಿ ಬಡ್ಡಿಯನ್ನು ನೀಡಲಾಗುತ್ತದೆಂದು ಅಧ್ಯಕ್ಷರು ತಿಳಿಸಿದರು.
ಪ್ರಗತಿಯ ಪಥದಲ್ಲಿ- ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆ-ಆಪರೇಟಿವ್ ಸೊಸೈಟಿಯು 1997 ರಲ್ಲಿ ಸುಳ್ಯದ ಗೌಡರ ಯುವ ಸೇವಾ ಸಂಘದಿಂದ 436 ಸದಸ್ಯರನ್ನು ಒಳಗೊಂಡಂತೆ ಸ್ಥಾಪಿಸಲ್ಪಟ್ಟಿತು. ಪ್ರಸ್ತುತ ಸಂಸ್ಥೆಯು 16,196 ಸದಸ್ಯರನ್ನು ಒಳಗೊಂಡಿದ್ದು, 4.06 ಕೋಟಿ ಪಾಲು ಬಂಡವಾಳವನ್ನು ಹೊಂದಿದೆ. 150 ಕೋಟಿಗೂ ಹೆಚ್ಚಿನ ಠೇವಣಿಯನ್ನು ಹೊಂದಿ, 136 ಕೊಟಿಗೂ ಹೆಚ್ಚಿನ ಸಾಲವನ್ನು ಸದಸ್ಯರಿಗೆ ವಿತರಿಸಲಾಗಿದ್ದು, ಸಂಸ್ಥೆಯು ನಿರಂತರವಾಗಿ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆಯೆಂದು ವಿವರಿಸಿದರು.
2021-22ನೇ ಸಾಲಿನಲ್ಲಿ ಸಂಸ್ಥೆಯು 1.20 ಕೋಟಿ ನಿವ್ವಳ ಲಾಭವನ್ನು ಗಳಿಸಿದೆ. ಪ್ರತಿ ವರ್ಷವೂ ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಡನ್ನು ನೀಡಲಾಗುತ್ತಿದ್ದು, ವಾರ್ಷಿಕ 700 ಕೋಟಿ ರೂ. ವಹಿವಾಟನ್ನು ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಮೋಹನ್‍ರಾಂ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ, ಮಡಿಕೇರಿ ಶಾಖೆಯ ಅಧ್ಯಕ್ಷ ಅಂಬೆಕಲ್ಲು ನವೀನ್, ಹಾಗೂ ವ್ಯವಸ್ಥಾಪಕ ಅಶೋಕ್ ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*