ಮಡಿಕೇರಿ ಜ.19 : ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಶಾಖಾ ಕಚೇರಿಯನ್ನು ಕೊಡಗು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಉದ್ಘಾಟಿಸಿದರು.
ಕೊಡಗು ಜಿಲ್ಲಾ ಪಂಚಾಯತ್ ಭವನದಲ್ಲಿರುವ ನೂತನ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಡಿಒಗಳ ಅಭ್ಯುದಯ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಸಂಘವು ಕಾರ್ಯ ನಿರ್ವಹಿಸುವಂತಾಗಲಿ ಎಂದರು.
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ರವೀಶ್ ಅವರು ಮಾತನಾಡಿ, ಪಿಡಿಒಗಳ ಹಿತ ರಕ್ಷಣೆ ಸಂಘದ ಮುಖ್ಯ ಧ್ಯೇಯವಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಯಶಸ್ವಿಗಾಗಿ ಅನುಷ್ಟಾನಿಸುವಲ್ಲಿ ಪಿಡಿಒಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘದಿAದ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಇದೇ ವೇಳೆ ಕೊಡಗು ಜಿಲ್ಲಾ ಪಂಚಾಯತ್‌ನ ನೂತನ ಮನರೇಗಾ ಶಾಖೆಯನ್ನು ಜಿ.ಪಂ.ಸಿ ಇಒ ಮತ್ತು ಜಿ.ಪಂ. ಉಪ ಕಾರ್ಯದರ್ಶಿ ಧನರಾಜು ಅವರು ಉದ್ಘಾಟಿಸಿದರು.
ಯೋಜನಾ ನಿರ್ದೇಶಕರಾದ ಜಗದೀಶ್, ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸಂಘದ ಉಪಾಧ್ಯಕ್ಷರಾದ ಲೋಕೇಶ್, ವೀಣಾ, ರಾಜ್ಯ ಪರಿಷತ್ ಸದಸ್ಯರಾದ ಬಿ.ವೈ.ಅಶೋಕ್ ಕುಮಾರ್ ಮತ್ತು ವಿವಿಧ ಗ್ರಾ.ಪಂ.ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*